ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿರ್ಬಂಧವನ್ನು ಉಲ್ಲಂಘಿಸಿ ಆಂಬ್ಯುಲೆನ್ಸ್’ನಲ್ಲಿ ಜನರನ್ನು ಸಾಗಿಸಲು ಯತ್ನಿಸಿದ ಹಿನ್ನೆಲೆಯಲ್ಲಿ ಚಾಲಕ ಸೇರಿದಂತೆ ಏಳು ಮಂದಿನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಲಾಕ್ ಡೌನ್ ಉಲ್ಲಂಘಿಸಿ ಮೈಸೂರು ಕಡೆ ಅಂಬ್ಯುಲೆನ್ಸ್ ನಲ್ಲಿ ಹೊರಟಿದ್ದ ಪುತ್ತೂರಿನ ಮಹಮ್ಮದ್ ಜುನೈದ್, ಮಹಮ್ಮದ್ ಇಲ್ಯಾಸ್, ಸಲೀಮುದ್ದೀನ್ ಯಾನೆ ಪಾಪು, ಅಬ್ದುಲ್ ರಜಾಕ್, ರಶೀದ್, ಸಂಶುದ್ದೀನ್, ಮಹಮ್ಮದ್ ಇರ್ಷಾದ್ ಬಂಧಿತರು.
ಕೆಎ.51.ಎಬಿ.3455 ರಿಜಿಸ್ಟ್ರೇಷನ್ ನಂಬರಿನ ಅಂಬ್ಯುಲೆನ್ಸ್’ನಲ್ಲಿ ರಾತ್ರಿ ಇವರೆಲ್ಲಾ ಹೊರಟಿದ್ದರು. ಕೊಡಗು ಜಿಲ್ಲೆಯ ಕುಶಾಲನಗರ ಸರಹದ್ದಿನ ಕೊಪ್ಪ ಎಂಬಲ್ಲಿ ಪೊಲೀಸರು ತಡೆದು ವಾಪಾಸ್ ಕಳುಹಿಸಿದ್ದರು. ಮತ್ತೆ ದಕ್ಷಿಣ ಕನ್ನಡ ಗಡಿಭಾಗ ಪ್ರವೇಶಿಸುವ ವೇಳೆ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ದ ಸುಮೊಟೋ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Get in Touch With Us info@kalpa.news Whatsapp: 9481252093

















