ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಸಲೀಲೆ ಸಿಡಿ ಬಯಲಿಗೆ ಬಂದ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ರಾಜ್ಯದಾದ್ಯಂತ ಸರಣಿ ಪ್ರತಿಭಟನೆ ನಡೆಸಿದ್ದವು. ಭಾರೀ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಪತ್ರದಲ್ಲಿ ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
2020ರ ಫೆ.6ರಂದು ರಮೇಶ್ ಜಾರಕಿಹೊಳಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post