ಕಲ್ಪ ಮೀಡಿಯಾ ಹೌಸ್ | ಶಬರಿಮಲೆ |
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ #Shabarimale Ayyappa Swamy Temple ಕರ್ನಾಟಕದ ಭಕ್ತರೊಬ್ಬರು ಆತ್ಮಹತ್ಯೆ #Suicide ಮಾಡಿಕೊಂಡಿರು ಘಟನೆ ನಡೆದಿದೆ.
ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ತಡರಾತ್ರಿ ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
Also read: ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post