ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯದ Kuvempu University ಆವರಣದಲ್ಲಿ ಮಂಗಳವಾರದಂದು ಸಸಿಗಳನ್ನು ನೆಡುವ ಮೂಲಕ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಇದೇ ಸಂದರ್ಭದಲ್ಲಿ ಕ್ಯಾಂಪಸ್ ಸುತ್ತಮುತ್ತ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಗುಲಾಬಿ ಹೂವುಗಳನ್ನು ನೀಡುವ ಮೂಲಕ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡದಂತೆ ಜಾಗೃತಿ ಮೂಡಿಸಲಾಯಿತು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್‌ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಟ, ಡಾ. ಕೆ. ಆರ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Also read: ಕುವೆಂಪು ವಿವಿ: ಅಧ್ಯಾಪಕೇತರ ಸಿಬ್ಬಂದಿಗೆ ಬೀಳ್ಕೊಡುಗೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















