No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಯಶಸ್ಸಿಗೆ ಹೊಸ ಕಾರ್ಯತಂತ್ರ ಅನಿವಾರ್ಯ: ಡಾ. ಕೊಟ್ರೇಶ್ವರ್

ಕುವೆಂಪು ವಿವಿ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ 'ಉದ್ಯಮ ಕ್ಷೇತ್ರದ ಹೊಸ ಪ್ರವೃತ್ತಿಗಳ' ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
March 19, 2022
in ಶಿವಮೊಗ್ಗ
0
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಯಶಸ್ಸಿಗೆ ಹೊಸ ಕಾರ್ಯತಂತ್ರ ಅನಿವಾರ್ಯ: ಡಾ. ಕೊಟ್ರೇಶ್ವರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಕೋವಿಡ್-19 Covid-19 ನಂತರದ ಕಾಲಘಟ್ಟದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕಾರ್ಪೊರೆಟ್ ಸಂಸ್ಥೆಗಳು ಮತ್ತೆ ಯಶಸ್ಸಿನ ಹಳಿಗೆ ಮರಳಬೇಕಾದರೆ, ಹೊಸ ಆಲೋಚನೆಗಳನ್ನು, ಹೊಸ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಲ್ಲವಾದರೆ ಗ್ರಾಹಕರನ್ನು ಸೆಳೆಯುವಲ್ಲಿ ಮತ್ತು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗುವ ಆತಂಕವಿದೆ ಎಂದು ಭಾರತೀಯ ಸಮಾಜ ವಿಜ್ಞಾನಗಳ ಸಂಶೋಧನಾ ಮಂಡಳಿ (ICSSR) ಯ ಹಿರಿಯ ಸಂಶೋಧನಾ ತಜ್ಞ ಡಾ. ಜಿ. ಕೊಟ್ರೇಶ್ವರ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ವಾಣಿಜ್ಯ ಶಾಸ್ತ್ರ ವಿಭಾಗ ‘ಉದ್ಯಮ ಕ್ಷೇತ್ರದ ಹೊಸ ಪ್ರವೃತ್ತಿಗಳು’ ಕುರಿತು ಶನಿವಾರ ಬಸವ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಸ್ತುತ ವಿವಿಧ ನೈಸರ್ಗಿಕ ಮತ್ತು ಮಾನವ ನಿರ್ಮಿತ ಕಾರಣಗಳಿಂದ ಸೃಷ್ಟಿಯಾಗಿರುವ ಕ್ಲಿಷ್ಠಕರ ವಾತಾವರಣದಲ್ಲಿ ಉದ್ಯಮ ಸಂಸ್ಥೆಗಳು ಉಳಿಯುವುದೇ ಕಷ್ಟಕರವಾಗಿದೆ. ಇದು ಒಂದೆಡೆ ಸವಾಲೆನಿಸಿದರೆ ಮತ್ತೊಂದು ರೀತಿಯಲ್ಲಿ ಅವಕಾಶಗಳ ಹೊಸ ಬಾಗಿಲು ತೆರೆದಿದೆ. ಈ-ಕಾಮರ್ಸ್, ಆನ್‍ಲೈನ್ ವಹಿವಾಟು, ಸ್ಟಾರ್ಟ್ ಅಪ್ ಆಧಾರಿತ ನವೋದ್ಯಮಗಳು ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವುದೇ ನಮ್ಮ ಕಣ್ಣ ಮುಂದಿರುವ ಜೀವಂತ ನಿದರ್ಶನಗಳು.

Also read: ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ಇಂತಹ ಸವಾಲಿನ ಔದ್ಯೋಗಿಕ ಮಾರುಕಟ್ಟೆಗೆ ವೃತ್ತಿಪರರನ್ನು ಸೃಷ್ಟಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಕ ಸಂಸ್ಥೆಗಳು ಬದಲಾದ ಸನ್ನಿವೇಶಗಳಿಗೆ ತಕ್ಕ ಹಾಗೆ ಪಠ್ಯಕ್ರಮ, ಪ್ರಾಯೋಗಿಕ ಚಟುವಟಿಕೆಗಳು ಮತ್ತು ಉದ್ಯಮ ಸಂಸ್ಥೆಗಳ ಜೊತೆ ವಿನಿಮಯಗಳಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳನ್ನು ಅಣಗೊಳಿಸುವತ್ತ ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಭಾರತದ ಆರ್ಥಿಕತೆಯಲ್ಲಿ ಒಂದು ವೈರುಧ್ಯಮಯವಾದ ವಾತಾವರಣವಿದೆ. ಒಂದೆಡೆ ಜಗತ್ತಿನ ಅತ್ಯಂತ ಶ್ರೀಮಂತರಿದ್ದರೆ, ಇನ್ನೊಂದೆಡೆ ಒಂದು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿರುವ ಬಡವರಿದ್ದಾರೆ. ಬಡವ ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವತ್ತ ಉದ್ಯಮ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕಿದೆ. ಕೈಗಾರಿಕೆಗಳು ಮತ್ತು ಕಾರ್ಪೊರೆಟ್ ಸಂಸ್ಥೆಗಳಿಗೆ ಶಾಂತಿಯುತ ವಾತಾವರಣ ಅತ್ಯಂತ ಮುಖ್ಯ. ಯುದ್ಧ, ಅಸ್ಥಿರತೆ, ಸಂಘರ್ಷಗಳು ಉದ್ಯಮ ಕ್ಷೇತ್ರಕ್ಕೆ ಬಲವಾದ ಪೆಟ್ಟು ನೀಡುತ್ತದೆ. ಹೀಗಾಗಿ ರಾಜಕೀಯ ಸ್ಥಿರತೆ ಮತ್ತು ದೃಢ ಸರ್ಕಾರ ಉದ್ಯಮ ಕ್ಷೇತ್ರಕ್ಕೆ ಅತ್ಯವಶ್ಯಕ ಎಂದರು.

ವಾಣಿಜ್ಯ ಶಾಸ್ತ್ರ ನಿಕಾಯದ ಡೀನ್ ಮತ್ತು ವಿಭಾಗದ ಮುಖ್ಯಸ್ಥ ಪ್ರೊ. ಎಸ್. ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಹಿರೇಮಣಿ ನಾಯಕ್, ಪ್ರೊ. ಎ. ಇಳಂಗೋವನ್, ಡಾ. ಕೆ. ಆರ್. ಮಂಜುನಾಥ್, ಡಾ. ಬಿನೋಯ್, ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಕೋವಿಡ್-19ಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

Next Post

ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ

kalpa News

kalpa News

Next Post
ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ

ಯಮ್ಮಿಗನೂರು ಗ್ರಾಮದಲ್ಲಾದ ಬೆಳೆ ನಷ್ಟ ಸಂಬಂಧ ಮಾಹಿತಿ ನೀಡಲು ಸಚಿವ ಬಿ.ಸಿ. ಪಾಟೀಲ್ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL