ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಡಾ. ಬಾಬು ಜಗಜೀವನ್ ರಾಮ್ ಅವರ 114ನೇ ಜನ್ಮದಿನಾಚರಣೆಯ ಅಂಗವಾಗಿ ಅಂಚಿನಲ್ಲಿರುವ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ ವಿಷಯ ಕುರಿತು ಏಪ್ರಿಲ್ 5 ಮತ್ತು 6 ರಂದು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದೆ.
ವಿವಿಯ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಏಪ್ರಿಲ್ 5 ಮತ್ತು 6 ರಂದು ಸಮ್ಮೇಳನ ಆಯೋಜಿಸಲಾಗಿದ್ದು, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ ಮಂಜಮ್ಮ ಜೋಗತಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.
ವಿವಿಯ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿವಿ ಕುಲಸಚಿವೆ ಅನುರಾಧ ಜಿ ಮತ್ತು ಖ್ಯಾತ ಜನಪದ ಗಾಯಕ ಜೋಗಿಲ ಸಿದ್ದರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕನ್ನಡ ವಿವಿಯ ಪ್ರಾಧ್ಯಾಪಕ ಡಾ. ಮೇಟ್ರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅಂಕಣಕಾರ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಮತ್ತು ಡಾ. ಕೆ. ಆರ್. ಮಂಜುನಾಥ್ ದಲಿತ ಮತ್ತು ಆದಿವಾಸಿ ಸಮುದಾಯಗಳಲ್ಲಿ ಉದ್ಯಮಶೀಲತೆ ವಿಷಯ ಕುರಿತು ಮಾತನಾಡಲಿದ್ದಾರೆ. ಇದಿನ ಡಾಟ್ ಕಾಂ ವೆಬ್‌ಪೋರ್ಟಲ್‌ನ ಸುದ್ದಿ ಸಂಪಾದಕ ಬಿ. ವಿ. ಶ್ರೀನಾಥ್ ಹಾಗೂ ಸಮ್ಮೇಳನದ ನಿರ್ದೇಶಕ ಮತ್ತು ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಸತ್ಯಪ್ರಕಾಶ್ ಎಂ ಆರ್ ಹಾಜರಿರಲಿದ್ದಾರೆ.
ಸಮ್ಮೇಳನದ ವಿಷಯದ ಮೇಲೆ ಕರ್ನಾಟಕದ ವಿವಿಧ ವಿವಿಗಳ ಸಂಶೋಧನಾರ್ಥಿಗಳು ಪ್ರಬಂಧಗಳನ್ನು ಮಂಡಿಸಲಿದ್ದಾರೆ ಹಾಗೂ ವಿವಿಯ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಹಾಗೂ ಉಪನ್ಯಾಸಕರು ಭಾಗಿಯಾಗಲಿದ್ದಾರೆ.
ಪುಸ್ತಕ ಲೋಕಾರ್ಪಣೆ:
ಈ ಸಂದರ್ಭದಲ್ಲಿ ‘ಡಾ. ಬಾಬು ಜಗಜೀವನ್ ರಾಮ್ಸ್ ಪಾರ್ಲಿಮೆಂಟರಿ ಸ್ಪೀಚಸ್ ಸಂ. -1 ರಕ್ಷಣೆ’ ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದು, ವಿಜಯಕರ್ನಾಟಕದ ಹಿರಿಯ ಪತ್ರಕರ್ತ ಬಿ. ಎಂ. ಅನಿಲ್ ಕುಮಾರ್ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post