No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ

ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ | ದುರಾಸೆಯೇ ಭ್ರಷ್ಟಾಚಾರದ ಮೂಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 28, 2024
in ಶಿವಮೊಗ್ಗ
0
ಅನೈತಿಕತೆಗೆ ಮನ್ನಣೆ, ಭ್ರಷ್ಟಾಚಾರದ ಹೆಚ್ಚಳ: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೇಸರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಇಂದು ಶ್ರೀಮಂತರಾಗಲು ಎಲ್ಲರೂ ಬಯಸುತ್ತಾರೆ, ಹಣವಂತರಿಗೆ ಗೌರವ ನೀಡುತ್ತಾರೆ. ಆದರೆ ನೈತಿಕ ಹಾದಿಯಲ್ಲಿ ಸಿರಿವಂತರಾಗಿದ್ದಾರೆಯೇ ಎಂಬ ಬಗ್ಗೆ ಯಾರಿಗೂ ಗಮನವಿಲ್ಲವಾಗಿರುವುದು, ಅನೈತಿಕರಿಗೆ ಮನ್ನಣೆ ದೊರೆಯುತ್ತಿರುವುದು ಭ್ರಷ್ಟಾಚಾರ ಸರ್ವತ್ರವಾಗಲು ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ Santhosh Hegade ಅಭಿಪ್ರಾಯಪಟ್ಟರು.

ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆ ಮಂಡ್ಯ ಜಿಲ್ಲಾ ಘಟಕಗಳು ಜಂಟಿ ಸಹಯೋಗದಲ್ಲಿ ಕುವೆಂಪು ವಿವಿಯ Kuvempu University ಬಸವ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ‘ವಿಶ್ವ ಸಾಮಾಜಿಕ ನ್ಯಾಯ ಮತ್ತು ಹೆಣ್ಣುಮಕ್ಕಳ ಹಕ್ಕುಗಳು: ಕಾನೂನು ಅರಿವು’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದುರಾಸೆ, ಭ್ರಷ್ಟಾಚಾರ ಮಾಡಿ ಸಂಪತ್ಭರಿತರಾದವರು ಇನ್ನಷ್ಟು ಲಂಚ ಪಡೆಯುವುದು, ಸೋಮಾರಿತನ ಬೆಳೆಸುವುದು, ಅಧಿಕಾರ ಕೊಂಡುಕೊಳ್ಳುವುದು ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದರು.

ಮಾನವನ ದುರಾಸೆಯ ಕಾರಣದಿಂದಾಗಿ ದೇಶದ ಹತ್ತಾರು ಲಕ್ಷ ಕೋಟಿಗಳ ಹಣ ಕೊಳ್ಳೆ ಹೊಡೆಯಲಾಗುತ್ತಿದೆ. 1950ನೇ ದಶಕದಿಂದ ಇಲ್ಲಿಯವರೆಗೂ ಜೀಪ್, ಬೋಫೋರ್ಸ್, ಕಾಮನ್ವೆಲ್ತ್ ಕ್ರೀಡಾಕೂಟ, ಕಲ್ಲಿದ್ದಲು ಮತ್ತು 2ಜಿ ಹಗರಣಗಳು ದೇಶವನ್ನು ಬಡವಾಗಿಸಿವೆ. ಇಂದಿಗೂ ಇದೇ ಸ್ಥಿತಿ ಮುಂದುವರಿದಿದೆ. ಹೀಗಾಗಿ ಹಣದುಬ್ಬರ, ದಿನಬಳಕೆ ವಸ್ತುಗಳ ದರ ಏರಿಕೆ, ಅನೀತಿಗಳು ಹೆಚ್ಚಾಗಿವೆ. ಯುವಸಮುಹ, ವಿದ್ಯಾರ್ಥಿಗಳು ಅನೈತಿಕ ಹಾದಿ ಹಿಡಿದವರ ಬಗ್ಗೆ ಸೂಕ್ಷ್ಮಾವಾಗಿರಬೇಕು ಎಂದು ಸಲಹೆಯಿತ್ತರು.

ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಸ್ ಸಿದ್ಧರಾಜು ಮಾತನಾಡಿ, ಶಿಕ್ಷಣ ಪಡೆದ ನಂತರ ಅದನ್ನು ಸಾಮಾಜಿಕ ಒಳಿತಿಗಾಗಿ ಬಳಸುವುದು ಮುಖ್ಯ. ಇಲ್ಲವಾದಲ್ಲಿ ದೇಶದಲ್ಲಿ ನೈಜ ಬದಲಾವಣೆ ಆಗುವುದಿಲ್ಲ. ಯುವಜನರಿಗೆ ಅವಕಾಶಗಳು ದೊರೆಯದೆ ಅನುತ್ಪಾದಕತೆಯತ್ತ ಸಾಗಬೇಕಾಗುತ್ತದೆ. ಧಾರ್ಮಿಕ ವಿಷಯಗಳಿಗಿಂತ ಸಾಮಾಜಿಕ, ಶೈಕ್ಷಣಿಕ ಅಗತ್ಯಗಳು ಮುಖ್ಯವಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

Also read: ಗಮನಿಸಿ! ಫೆ. 29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಶಿವಮೊಗ್ಗದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ ಎನ್ ಚಂದನ್ ಮಾತನಾಡಿ, ಬಾಲಕಿಯರು, ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ನೆರೆಹೊರೆಯವರಿಂದಲೇ ಅತಿಹೆಚ್ಚಿನ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಬಾಲ್ಯದಿಂದಲೇ ಅವರಿಗೆ ದೌರ್ಜನ್ಯ ರಕ್ಷಣೆಯ ಅರಿವು ನೀಡುವುದು ಮುಖ್ಯ. ಪೋಕ್ಸೋ ಅಪರಾಧದ ಸಮಸ್ಯೆ ಅಧಿಕವಾದ ಕಾರಣ ಅಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಮೀಸಲಾದ ಎರಡು ವಿಶೇಷ ಕೋರ್ಟುಗಳು ಶಿವಮೊಗ್ಗದಲ್ಲಿ ಇವೆ. ಅಗತ್ಯವಿರುವ ಎಲ್ಲ ಮಹಿಳೆಯರಿಗೆ, ಆಸಿಡ್ ದಾಳಿಗೆ ಒಳಗಾದವರಿಗೆ ನ್ಯಾಯ ಪಡೆಯಲು ಉಚಿತ ಕಾನೂನಿನ ನೆರವು ನೀಡುವ ಕೆಲಸವನ್ನು ಪ್ರಾಧಿಕಾರದ ವತಿಯಿಂದ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ ಎಸ್ ವೆಂಕಟೇಶ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮಂಜುನಾಥ್ ನಾಯಕ್, ವಿವಿಯ ಕುಲಸಚಿವರು ವಿಜಯಕುಮಾರ್ ಹೆಚ್ ಬಿ , ಪರೀಕ್ಷಾಂಗ ಕುಲಸಚಿವರು ಎಸ್ ಎಂ ಗೋಪಿನಾಥ್, ಹಣಕಾಸು ಅಧಿಕಾರಿ ಜಿ ಬಂಗಾರಪ್ಪ ವಿವಿಯ ವಿವಿಧ ವಿಭಾಗಗಳ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಬೀ ಜಿ ಶಿವಮೂರ್ತಿ, ಬೆಂಗಳೂರು ನಗರ ಪೊಲೀಸ್ ಉಪ ಆಯುಕ್ತರು ಎಸ್ ಸಿದ್ಧರಾಜು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆಯ ಅಧ್ಯಕ್ಷೆ ರಜನಿರಾಜ್, ಮಹಿಳಾ ಹಕ್ಕುಗಳ ಅರಿವು ಕಾರ್ಯಕರ್ತೆ ಕೀರ್ತನ ಅವರುಗಳು ಮಹಿಳೆಯರು, ವಿದ್ಯಾರ್ಥಿನಿಯರಿಗೆ ಅಗತ್ಯವಿರುವ ಕಾನೂನಿನ ತಿಳುವಳಿಕೆ, ಹಕ್ಕು, ಸವಲತ್ತು, ಜವಾಬ್ದಾರಿಗಳ ಕುರಿತು ಉಪ್ಯನ್ಯಾಸ ನೀಡಿ ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news        

Kalahamsa Infotech private limited                          

Tags: Kannada NewsKannada News LiveKannada News Online ShivamoggaKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaSanthosh HegadeShankaraghattaShimogaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್ಸಂತೋಷ್ ಹೆಗ್ಡೆ
Share197Tweet123Send
Previous Post

51ರ ಸಂಭ್ರಮದಲ್ಲಿ ಬಹು ಕ್ಷೇತ್ರದ `ಕೃಷಿಕ’ ಪತ್ರಕರ್ತ ಗಜೇಂದ್ರಸ್ವಾಮಿ

Next Post

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL