ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಡಾ. ಬಿ. ಆರ್ ಅಂಬೇಡ್ಕರ್ Dr.B.R. Ambedkar ಅವರು ಸಾವಿರಾರು ಸಂಕಟಗಳು ಬಂದರು, ಸಹನೆ ಮೀರದೆ, ಸಾಧನೆಯ ಹಾದಿಯಲ್ಲಿ ಸಾಗಿದವರು. ಅವರು ಭಾರತೀಯ ಸಾಮಾಜಿಕ ಸ್ಥರವಿನ್ಯಾಸದ ಕೂಪದಲ್ಲಿ ನರಳಿ, ನರಳಿ ಅರಳಿದ್ದು ಒಂದು ರೀತಿ ವಿಸ್ಮಯವೇ ಸರಿ. ಭಾರತೀಯ ಸಾಮಾಜಿಕ ವ್ಯವಸ್ಥೆಯ ನಾಡಿಮಿಡಿತವನ್ನು ಅರಿತು, ಮಾನವೀಯತೆಯ ಔಷಧಿಯನ್ನು ನೀಡಿದ ಸಾಮಾಜಿಕ ವೈದ್ಯರು. ಅಂಬೇಡ್ಕರ್ ಅವರದು ಅಂತಹ ಅನುಭವರೂಪಿತ ವ್ಯಕ್ತಿತ್ವವೆಂದು ಖ್ಯಾತ ಸಾಹಿತಿ ಡಾ. ಅರ್ಜುನ ಗೋಳಸಂಗಿ ಅವರು ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಸವ ಸಭಾಭವನದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನದ ನಿಮ್ಮಿತ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್‍ಯಕ್ರಮದಲ್ಲಿ “ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವ”ಕುರಿತು ಮಾತನಾಡಿದರು.

Also read: ಡಿ.8ರಂದು ಸಾರ್ಥಕ ಸುವರ್ಣ: ಸಂಸದ ರಾಘವೇಂದ್ರ ಅವರಿಗೆ ಅಭಿನಂದನಾ ಕಾರ್ಯಕ್ರಮ
ಕಾರ್‍ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ಎಸ್. ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನಚರಿತ್ರೆಯೆಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರ್ ಅವರು ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.












Discussion about this post