ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ದಲಿತರ ನಾಯಕ ಮಾತ್ರವಲ್ಲ. ಎಲ್ಲ ಸಮುದಾಯಗಳಿಗೂ ಸಲ್ಲುವ ರಾಷ್ಟ್ರನಾಯಕ. ಸರ್ವರ ಸರ್ವತೋಮುಖ ಅಭಿವೃದ್ಧಿಯ ಮೂಲಕ ಸಮಸಮಾಜ ನಿರ್ಮಾಣವಾಗಬೇಕೆಂಬ ಕನಸ್ಸು ಕಂಡವರು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ.ಸಿ. ಗೀತಾ ಅಭಿಪ್ರಾಯಪಟ್ಟರು.
ಕುವೆಂಪು ವಿವಿಯ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಶುಕ್ರವಾರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 132ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also read: ಜಾಗೃತಿ ಅಭಿಯಾನದ ಮೂಲಕ ಮತದಾನ ಹೆಚ್ಚಾಗುವ ನಿರೀಕ್ಷೆ
ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆನ್ ಲೈನ್ ಸಂದೇಶ ನೀಡಿ, ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಗಿದ್ದು, ಚುನಾವಣೆಯ ನಂತರ ವಿಶ್ವವಿದ್ಯಾಲಯದ ವತಿಯಿಂದ “ಸಾಮರಸ್ಯ ಭಾರತ: ಬುದ್ಧ ಬಸವ ಅಂಬೇಡ್ಕರ್ ಚಿಂತನೆಗಳು” ಎಂಬ ಕೃತಿಯನ್ನು ಪ್ರಕಟಿಸುವ ಮೂಲಕ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಲಾಗುವುದು ಎಂದರು.












Discussion about this post