ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ Kuvempu University ಆಡಳಿತ ಭವನದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.
ಪ್ರೊ ಕೆ.ಆರ್. ಮಂಜುನಾಥ್ ಅವರು ನೆರೆದಿದ್ದವರಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ.ತಿಮ್ಮರಾಯಪ್ಪ, ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಜಗನ್ನಾಥ ಡಾಂಗೆ, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ. ಎಂ.ಆರ್. ಸತ್ಯಪ್ರಕಾಶ್, ವಾಣಿಜ್ಯ ನಿಕಾಯದ ಡೀನ್ ಪ್ರೊ.ಎಚ್.ಎನ್. ರಮೇಶ್, ಉಪಕುಲಸಚಿವರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















