ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ರಾಜ್ಯ ಸರ್ಕಾರ ಶ್ರೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಉಂಟಾಗುವ ಅಪಾಯಗಳು ಹೆಚ್ಚಿ, ಪಶು ಪಕ್ಷಿ ಪ್ರಾಣಿಗಳು ಸಾಯುತ್ತವೆ. ಮುಂದಿನ ದಿನಗಳಲ್ಲಿ ಇದರಿಂದ ಮಾನವಸಂಕುಲ ಹೆಚ್ಚಿನ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದುಕುವೆಂಪು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ನಾಗರಜ ಪರಿಸರ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯಮಟ್ಟದ ಅಂತರ್ ಕಾಲೇಜು ಶಿಬಿರದಲ್ಲಿ ಶ್ರಮದಾನದ ಅಂಗವಾಗಿ ಭದ್ರಾ ಜಲಾಶಯದ ಆವರಣದಲ್ಲಿ ಶಿಬಿರಾರ್ಥಿಗಳು ಮತ್ತು ಅಧಿಕಾರಿಗಳು ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಸರ್ಕಾರ, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಅಧಿಕಾರಿಗಳು ಈ ಬಗ್ಗೆ ಶ್ರೀಘ್ರ ಗಮನ ಹರಿಸಿ ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ನಿರ್ಮೂಲನೆ ಕುರಿತು ಶ್ರೀಘ್ರ ಕ್ರಮಕೈಗೊಂಡು ಪರಿಸರದ ಸಂರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸ ಬೇಕಾಗಿದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post