ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಭಾರತದ ಸ್ವಾತಂತ್ರ್ಯ ಮಹೋತ್ಸವದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ಸಂಪನ್ನಗೊಂಡಿತು.
ಆಜಾದಿ ಕಾ ಅಮೃತ್ ಮಹೋತ್ಸವ್ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ಕಾಲೇಜುಗಳ ಎನ್’ಎಸ್’ಎಸ್ ಸ್ವಯಂ ಸೇವಕ/ಸೇವಕಿಯರಿಗೆ ವಿಶ್ವವಿದ್ಯಾಲಯ ಮಟ್ಟದ ಭಾರತದ ಸ್ವಾತಂತ್ರ್ಯ ಚಳುವಳಿಗಳ ವಿಷಯ ಕುರಿತ ಪ್ರಬಂಧ ಸ್ಪರ್ಧೆಯನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ರಾಧಾಕೃಷ್ಣ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ ಪರಿಸರ ಹಾಗೂ ಪ್ರಾಂಶುಪಾಲರಾದ ಡಾ.ಎಚ್.ಎಂ. ವಾಗ್ದೇವಿ, ಕಾಲೇಜಿನ ಎನ್’ಎಸ್’ಎಸ್ ಅಧಿಕಾರಿಗಳಾದ ಡಾ.ಹಾ.ಮ. ನಾಗಾರ್ಜುನ ಮತ್ತು ಡಾ.ಪಿ. ವೆಂಕಟೇಶ್ ಹಾಗೂ ವಿಶ್ವವಿದ್ಯಾಲಯದ ರಾಸೇಯೋ ಸಿಬ್ಬಂಧಿ ರಾಚಪ್ಪ ಮುಂತಾದವರು ಉಪಸ್ಥಿತರಿದ್ದರು.
ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಬಂಧವನ್ನು ಮಂಡಿಸಿ ವಿಜೇತರಾದ ಸ್ವಯಂ ಸೇವಕ / ಸೇವಕಿಯರಿಗೆ ಆಗಸ್ಟ್ 15 ರಂದು ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಬಹುಮಾನಗಳನ್ನು ನೀಡಲಾಗುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post