ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಗಸ್ಟ್ 17ರಂದು ಬೆಳಿಗ್ಗೆ 9:30ಕ್ಕೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಉತ್ತರ ಕನ್ನಡದ ಸಹ್ಯಾದ್ರಿ ಕಮ್ಯೂನಿಟಿ ಡೆವೆಲಪ್‌ಮೆಂಟ್ ಅಂಡ್ ವುಮೆನ್ ಎಂಪವರ್‌ಮೆಂಟ್ ಸೊಸೈಟಿ (ಸ್ಕಾಡ್‌ವೆಸ್) ಸಂಸ್ಥೆಯು ಸಂದರ್ಶನದಲ್ಲಿ ಭಾಗವಹಿಸಲಿದೆ. ಕಮ್ಯೂನಿಟಿ ಆರ್ಗನೈಸರ್ (10) ಮತ್ತು ಕಮ್ಯೂನಿಟಿ ಸೂಪರ್‌ವೈಸರ್ (05) ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಭಾಗದ ಅಧ್ಯಕ್ಷ ಪ್ರೊ. ಎ. ರಾಮೇಗೌಡ, ಬಿಎಸ್‌ಡಬ್ಲ್ಯೂ ಮತ್ತು ಎಂಎಸ್‌ಡಬ್ಲ್ಯೂ ಪದವೀಧರರು ಸಂದರ್ಶನದಲ್ಲಿ ಭಾಗವಹಿಸಬಹುದು. ಅಂತಿಮ ವರ್ಷದ ವಿದ್ಯಾರ್ಥಿಗಳು ಕೂಡ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾಲಯ, ತುಮಕೂರು ವಿವಿ, ಬೆಂಗಳೂರು ನಗರ ವಿವಿ, ಬೆಂಗಳೂರು ಉತ್ತರ ವಿವಿ, ರಾಣಿ ಚೆನ್ನಮ್ಮ ವಿವಿ ಮತ್ತು ಬಿಎಸ್‌ಡಬ್ಲ್ಯೂ ಕೋರ್ಸ್ ಹೊಂದಿರುವ ಕುವೆಂಪು ವಿಶ್ವವಿದ್ಯಾಲಯದ ಕಾಲೇಜುಗಳ ವಿದ್ಯಾರ್ಥಿಗಳು ಈಗಾಗಲೇ ನೊಂದಣಿ ಮಾಡಿಕೊಂಡಿದ್ದಾರೆ. ನೊಂದಣಿ ಮಾಡಿಕೊಳ್ಳದ ವಿದ್ಯಾರ್ಥಿಗಳು ಕೂಡ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಪದವಿಯ ಮೂಲ ಅಂಕಪಟ್ಟಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿ, ವೈಯುಕ್ತಿಕ ವಿವರ (Resume) ದ್ವಿಪ್ರತಿಯಲ್ಲಿ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9739244374 ಮತ್ತು 9916667262 ಅನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post