ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದದವರಿಗೆ ಗೌರವಯುತವಾಗಿ ಬೀಳ್ಕೊಡುಗೆ ನೀಡಲಾಯಿತು.
ಅಧ್ಯಾಪಕೇತರ ನೌಕರರಾದ ಎಚ್. ರಂಗನಾಥ್, ಎಲ್.ಎಚ್ ಬಸವರಾಜ್, ಜಿ. ಸುಧಾಕರ್, ಎಚ್. ತಿಮ್ಮಯ್ಯ, ಸಿ. ಶಿವಲಿಂಗಯ್ಯ, ಆರ್. ಮಂಜುಳಮ್ಮ, ಕೆ.ಎಸ್. ಸುಲೋಚನಾ ಮತ್ತು ದೇವಮ್ಮ ಅವರಿಗೆ ವಿವಿಯ ಅಧ್ಯಾಪಕೇತರ ನೌಕರರ ಸಂಘದ ವತಿಯಿಂದ ಇತ್ತೀಚೆಗೆ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಕುಲಸಚಿವ (ಪರೀಕ್ಷಾಂಗ) ಪ್ರೊ ಸಿ.ಎಂ. ತ್ಯಾಗರಾಜ್, ನಿವೃತ್ತ ನೌಕರರು ಹಾಗೂ ಅವರ ಕುಟುಂಬ ವರ್ಗದವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post