ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯ, Kuvempu University ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ಬೆಳಿಗ್ಗೆ 9.30ಕ್ಕೆ ಜ್ಞಾನಸಹ್ಯಾದ್ರಿಯ ಬಸವ ಸಭಾಭವನದಲ್ಲಿ ವಿಶ್ವ ಸಾಮಾಜಿಕ ನ್ಯಾಯ ಮತ್ತು ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು ಕಾರ್ಯಾಗಾರ ನಡೆಯಲಿದೆ.
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಹಾಗೂ ನಿವೃತ್ತ ಲೋಕಾಯುಕ್ತ ಎನ್. ಸಂತೋಷ್ ಹೆಗ್ಗಡೆ Santhosh Hagade ಕಾರ್ಯಾಗಾರ ಉದ್ಘಾಟಿಸಿ ಮಾತನಾಡಲಿದ್ದಾರೆ.

Also read: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಯಾವಾಗ | ಸಂಸದ ರಾಘವೇಂದ್ರ ಹೇಳಿದ್ದೇನು?
ಬೆಂಗಳೂರಿನ ಪೊಲೀಸ್ ಉಪ ಆಯುಕ್ತ ಎಸ್. ಸಿದ್ದರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ. ಜಿ. ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆಯ ರಜನಿರಾಜ್ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post