No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

ಕುವೆಂಪು ವಿವಿಯಲ್ಲಿ `ಸಹ್ಯಾದ್ರಿ ಉತ್ಸವ-2026'ಕ್ಕೆ ಅದ್ಧೂರಿ ಚಾಲನೆ: ಜಾನಪದ ಕಲೆಗಳ ವೈಭವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2026
in ಶಿವಮೊಗ್ಗ
0
ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಎನ್ನುವುದು ಅತ್ಯಂತ ಮುಖ್ಯವಾದುದು ಎಂದು ಚಿತ್ರನಟಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಜಯಮಾಲ #Jayamala ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ #Kuvempu University ವತಿಯಿಂದ ಆಯೋಜಿಸಲಾದ 2026ನೇ ಸಾಲಿನ ‘ಸಹ್ಯಾದ್ರಿ ಉತ್ಸವ’ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ಅತ್ಯಂತ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಜಾಗತಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇಡೀ ದೇಶ ಮತ್ತು ಜಗತ್ತು ಯುದ್ಧದ ಭೀತಿಯಿಂದ ತುಂಬಿದೆ. ಇಂತಹ ಸಮಯದಲ್ಲಿ ಮನುಷ್ಯನಿಗೆ ಎಲ್ಲಕ್ಕಿಂತ ಮೊದಲು ಬೇಕಾಗಿರುವುದು ಮಾನವೀಯತೆ. ಕುವೆಂಪು ಅವರು ಹೇಳಿದಂತೆ ಇದು ‘ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂದರು.

ನಾನು ಪುನರ್ವಸತಿಯ ಬಗ್ಗೆ ಸುದೀರ್ಘವಾಗಿ ಸಂಶೋಧನೆ ನಡೆಸಿ ಥೀಸಿಸ್ ಬರೆದಿದ್ದೇನೆ. ಅಲ್ಮಟ್ಟಿಯ ಅಣೆಕಟ್ಟು ಸಂತ್ರಸ್ತರ ನೋವು ಮತ್ತು ಅನುಭವಗಳನ್ನು ಹತ್ತಿರದಿಂದ ಕಂಡಿದ್ದೇನೆ. ನನ್ನ ಈ ಶೈಕ್ಷಣಿಕ ಸಾಧನೆಗಾಗಿ ಅಂದಿನ ರಾಷ್ಟ್ರಪತಿಗಳಾದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಂದ ಪ್ರಶಸ್ತಿ ಪಡೆದ ಸಾರ್ಥಕತೆ ನನಗಿದೆ. ನಿರಾಶ್ರಿತ ಭಾವ ಎಂಬುದು ಪ್ರತಿಯೊಬ್ಬ ಮನುಷ್ಯನನ್ನೂ ಕಾಡುವಂತಹದ್ದು, ಈ ಕಾರ್ಯಕ್ರಮಕ್ಕೆ ಬರಬೇಕೆಂಬ ಹಂಬಲ ನನಗಿತ್ತು ಎಂದು ನೆನಪು ಮಾಡಿಕೊಂಡರು.

ಕುವೆಂಪು ಅವರ ಹೋಗುವೆನು ನಾ ಮಲೆಯ ನಾಡಿಗೆ ಎಂಬ ಸಾಲುಗಳನ್ನು ಸ್ಮರಿಸುತ್ತಾ, ಮಲೆನಾಡು ಅತ್ಯಂತ ನಯನ ಮನೋಹರವಾದ ಕಾಡುಗಳನ್ನು ಹೊಂದಿರುವ ತಾಣ. ಇದು ಕೇವಲ ಪ್ರಕೃತಿಯಲ್ಲ, ದೈತ್ಯ ಪ್ರತಿಭೆಗಳನ್ನು ನಾಡಿಗೆ ನೀಡಿದ ಪವಿತ್ರ ಭೂಮಿ, ಎಂದು ಮಲೆನಾಡಿನ ಸಾಹಿತ್ಯಿಕ ಶ್ರೀಮಂತಿಕೆಯನ್ನು ಬಣ್ಣಿಸಿದರು.

ವಿದ್ಯಾರ್ಥಿಗಳು ತಮ್ಮ ಜಾಣ್ಮೆಯನ್ನು ಸರಿಯಾದ ದಾರಿಯಲ್ಲಿ ಉಪಯೋಗಿಸಬೇಕು. ಮನುಷ್ಯನನ್ನು ಮೃದುವಾಗಿರಿಸುವ ಗುಣಗಳಾದ ಸಾಹಿತ್ಯ, ಸಂಗೀತ ಮತ್ತು ಕಲೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ಪ್ರೀತಿ, ಸಹಿಷ್ಣುತೆ ಮತ್ತು ಉಪಕಾರದ ಗುಣಗಳನ್ನು ಮರೆಯಬೇಡಿ. ಮನುಷ್ಯ ಭಾವನಾಶೂನ್ಯನಾದರೆ ಎಷ್ಟೇ ಆಸೆಗಳಿದ್ದರೂ ಬದುಕು ಶೂನ್ಯವಾಗುತ್ತದೆ. ವಿಶ್ವವಿದ್ಯಾಲಯ ನೀಡುವ ಉತ್ತಮ ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಅವರು ಮಾತನಾಡಿ, ಕನ್ನಡ ಸಿನಿಮಾ ರಂಗವು ಅತ್ಯಂತ ಉತ್ತುಂಗದಲ್ಲಿದ್ದ ಕಾಲದಲ್ಲಿ ತನ್ನ ಅಭಿನಯದ ಮೂಲಕ ಮನೆಮಾತಾದವರು ಡಾ. ಜಯಮಾಲಾ. ಅವರು ಕೇವಲ ಬೆಳ್ಳಿ ಪರದೆಯ ತಾರೆಯಲ್ಲ, ಸಾಧನೆಯ ಶಿಖರಕ್ಕೇರಿದ `ಧ್ರುವತಾರೆ’. ಅವರೊಟ್ಟಿಗಿನ ನೆನಪುಗಳು ಸದಾ ಹಸಿರು. ಅವರು ಅಭಿನಯಿಸಿದ ಚಿತ್ರಗಳು ‘ಸ್ವರ್ಣ ಕಮಲ’ ಪ್ರಶಸ್ತಿ ಪಡೆದಿರುವುದು ಅವರ ಕಲಾತ್ಮಕ ಪ್ರತಿಭೆಗೆ ಸಾಕ್ಷಿ. ಅಂತಹ ಸಾಧಕಿ ನಮ್ಮ ನಡುವೆ ಇರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.

ಇವತ್ತಿನ ಪಥಸಂಚಲನದ ವೈಭವವೇ ಅದಕ್ಕೆ ಸಾಕ್ಷಿ. ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಕಲಾ ಪ್ರಕಾರಗಳು ಪಥಸಂಚಲನದ ವಿಶೇಷತೆಯನ್ನು ಹೆಚ್ಚಿಸಿವೆ, ಎಂದು ಮಲೆನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಬಣ್ಣಿಸಿದರು. ವಿದ್ಯಾರ್ಥಿಗಳು ಈ ಮೂರು ದಿನಗಳ ಕಾಲ ಎಲ್ಲವನ್ನೂ ಸಂಭ್ರಮದಿಂದ ಕಲಿಯಬೇಕು. ಇದು ಕೇವಲ ಸ್ಪರ್ಧೆಯಲ್ಲ, ನಿಮ್ಮೊಳಗಿನ ಕಲೆ ಪ್ರದರ್ಶಿಸಲು ಸಿಕ್ಕಿರುವ ಸುವರ್ಣ ಅವಕಾಶ. ಈ ವೇದಿಕೆಯನ್ನು ಸಮರ್ಥವಾಗಿ ಬಳಸಿಕೊಳ್ಳಿ, ಎಂದು ಆಶಿಸಿದರು.

ಆಧುನಿಕ ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾ, ಇಂದಿನ ಜಗತ್ತಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಷ್ಟೇ ಮುಂದುವರಿದಿದ್ದರೂ, ಮನುಷ್ಯನ ಮನುಷ್ಯತ್ವವನ್ನು ಮತ್ತು ಭಾವನೆಗಳನ್ನು ಉಳಿಸುವುದು ಕಲೆ ಮಾತ್ರ. ಎಂತಹ ತಂತ್ರಜ್ಞಾನವೂ ಕಲೆಯನ್ನು ಎಂದಿಗೂ ರೀಪ್ಲೇಸ್ ಮಾಡಲು ಸಾಧ್ಯವಿಲ್ಲ. ಮನುಷ್ಯನಿಗೆ ಕೊನೆಯವರೆಗೂ ಭರವಸೆ ಇರುವುದು ಕಲೆ ಮತ್ತು ಸಾಹಿತ್ಯದಲ್ಲಿ ಮಾತ್ರ ಎಂಬ ಗಹನವಾದ ವಿಚಾರವನ್ನು ಮಂಡಿಸಿದರು.
ಗಮನಸೆಳೆದ ಪಥಸಂಚಲನ

ಪಥ ಸಂಚಲನದಲ್ಲಿ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾವಾಡಿ, ಕಂಸಾಳೆ, ಕೊಡವ ನೃತ್ಯ, ನವದುರ್ಗೆಯರ ವೇಷಧಾರಿಗಳು, ಪೂಜಾ ಕುಣಿತ, ನಂದಿ ಕೋಲು, ಕಾಡು ಮನುಷ್ಯರ ವೇಷ ಹಾಗೂ ವೀರಗಾಸೆ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ವಿಶೇಷವಾಗಿ ಕುವೆಂಪು ಶತಮಾನೋತ್ಸವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ `ವಿವಿಧತೆಯಲ್ಲಿ ಏಕತೆ’ ಎಂಬ ಪರಿಕಲ್ಪನೆಯ ಪಥ ಸಂಚಲನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಕುವೆಂಪು ಪ್ರತಿಮೆಗೆ ಹಾರ ಹಾಕುವ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಸಾಂಪ್ರದಾಯಿಕವಾಗಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಹ್ಯಾದ್ರಿ ಉತ್ಸವ ಹಾಗೂ ಪಥ ಸಂಚಲನಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಜಯಮಾಲಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ದೀಪ ಬೆಳಗಿದರು.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸುಮಾರು 40ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

ವೇದಿಕೆಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ, ಹಣಕಾಸು ಅಧಿಕಾರಿ ಪ್ರೊ. ಎಚ್.ಎನ್. ರಮೇಶ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಜಿ. ಪ್ರಶಾಂತ್ ನಾಯಕ್, ಪ್ರೊ. ವಿಜಯಕುಮಾರ, ಪ್ರೊ. ವೆಂಕಟೇಶ್, ಪ್ರೊ. ಸತ್ಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: JayamalaKannada NewsKannada News LiveKannada News Online ShivamoggaKannada WebsiteKannadaNewsWebsiteKuvempu UniversityLatestNewsKannadaLocalNewsMalnadNewsNews in KannadaNews KannadaProf. Sharath AnanthamurthyShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಜಯಮಾಲಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet124Send
Previous Post

ಈ ದಿನ ಶಿವಮೊಗ್ಗ-ತುಮಕೂರು-ಶಿವಮೊಗ್ಗ ರೈಲು ರದ್ದು, ಯಶವಂತಪುರ-ಶಿವಮೊಗ್ಗ ಟ್ರೈನ್ ಅಪ್ಡೇಟ್

Next Post

Malnad is a Cultural ‘Gharana’ of Great Minds: Dr. Jayamala at Sahyadri Utsava

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL