No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ

ಕುವೆಂಪು ವಿವಿ ಶೈಕ್ಷಣಿಕ ಪ್ರಗತಿಯ ಚಿಂತನ-ಮಂಥನ ಕಾರ್ಯಕ್ರಮ

kalpa News by kalpa News
August 2, 2021
in ಶಿವಮೊಗ್ಗ
0
ಬೌದ್ಧಿಕ ಬೆಳವಣಿಗೆಯೇ ವಿವಿಯ ಅಸ್ಥಿತ್ವ: ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಯಾವುದೇ ಹಿನ್ನಡೆಯಾಗದಂತೆ ಆನ್‌ಲೈನ್ ತರಗತಿಗಳು, ಉಪನ್ಯಾಸ ಸರಣಿಗಳು Shimಮತ್ತು ವೆಬಿನಾರ್‌ಗಳನ್ನು ನಡೆಸುವ ಮೂಲಕ ಬೌದ್ಧಿಕ ಬೆಳವಣಿಗೆಗೆ ಸಮಗ್ರ ಗಮನ ನೀಡುವ ಮೂಲಕ ವಿಶ್ವವಿದ್ಯಾಲಯವನ್ನು ಜ್ಞಾನದ ಹರಿವಿನಲ್ಲಿ ಮುಂಚೂಣಿಯಲ್ಲಿಡಲಾಗಿದೆ ಎಂದು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿರುವ ಬಸವ ಸಭಾ ಭವನದಲ್ಲಿ ಇಂದು ನಡೆದ ವಿವಿ ಆಡಳಿತ ಮತ್ತು ಶೈಕ್ಷಣಿಕ ಪ್ರಗತಿಯ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರನ್ನು ಆನ್‌ಲೈನ್ ಫ್ಲಾಟ್‌ಫಾರ್ಮ್‌ಗಳ ಮೂಲಕ ಕಳೆದ ಒಂದೂವರೆ ವರ್ಷಗಳಿಂದ ಚಲನಶೀಲರನ್ನಾಗಿ ಮುನ್ನಡೆಸಲಾಗಿದೆ. ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗದಂತೆ ಆನ್‌ಲೈನ್ ಮೂಲಕವೇ ಘಟಿಕೋತ್ಸವವನ್ನು ಯಶಸ್ವಿಯಾಗಿ ನಡೆಸಿ ಮಾದರಿ ನಿರ್ಮಿಸಲಾಯಿತು. ಕೊರೋನಾ ಸಮಸ್ಯೆಯು ಪ್ರಗತಿಗೆ ಅಲ್ಪ ತಡೆಯಾದರೂ ಸಹ ವಿವಿಯು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಮುಂದಿದೆ. ಈ ಅಕಾಡೆಮಿಕ್ ಬೆಳವಣಿಗೆಯೇ ವಿಶ್ವವಿದ್ಯಾಲಯ ಎಂದು ನಾನು ನಂಬಿದ್ದೇನೆ ಅದನ್ನು ಮುಂದುವರಿಸೋಣ ಎಂದರು.

ವಿದೇಶದ 25 ವಿವಿಗಳೊಂದಿಗೆ ಸಂಶೋಧನಾ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಈ ಮೂಲಕ ಅಧ್ಯಾಪಕರುಗಳಿಗೆ ಸಂಶೋಧನೆಯನ್ನು ತೀವ್ರಗೊಳಿಸಲು ಕೋರಲಾಗಿದೆ. ಕರ್ನಾಟಕ ಮತ್ತು ದೇಶದ ಮಹನೀಯರುಗಳಾದ ವಚನಕಾರ್ತಿ ಅಕ್ಕಮಹಾದೇವಿ, ಅಲ್ಲಮಪ್ರಭು, ಡಾ. ರಾಜ್‌ಕುಮಾರ್ ಸೇರಿದಂತೆ ಹಲವು ಮಹನೀಯರುಗಳ ಅಧ್ಯಯನ ಪೀಠಗಳನ್ನು ಆರಂಭಿಸಿ ಅವರ ಕೊಡುಗೆ, ಚಿಂತನೆಗಳ ಕುರಿತ ಸಂಶೋಧನೆಗಳನ್ನು ಕೈಗೊಳ್ಳಲು ಉತ್ತೇಜಿಸಲಾಗಿದೆ. ದೇಶದ ಪ್ರತಿಷ್ಠಿತ ಡಿಆರ್‌ಡಿಓ ಸಂಸ್ಥೆಯು ಸಂಶೋಧನಾ ಪ್ರಯೋಗಾಲಯವನ್ನು ವಿವಿಯಲ್ಲಿ ಆರಂಭಿಸಲು ಯೋಜಿಸುತ್ತಿದೆ. ದೂರಶಿಕ್ಷಣ ನೀಡುವ ಅವಕಾಶವನ್ನು ನಿಲ್ಲಿಸಿದಾಗ ಯುಜಿಸಿ ಜೊತೆಗೆ ಸಮನ್ವಯ ಸಾಧಿಸಿ ವಿವಿಗೆ ಆನ್‌ಲೈನ್ ಮೂಲಕ ಪದವಿ, ಸ್ನಾತಕೋತ್ತರ ಕೋರ್ಸ್‌ಗಳನ್ನು ನೀಡುವ ಅರ್ಹತೆ ಮತ್ತು ಅನುಮತಿಯನ್ನು ದೊರಕಿಸಿಕೊಳ್ಳಲಾಗಿದೆ. ಈಗಾಗಲೇ ಪ್ರವೇಶಾತಿ ಕಾರ್ಯವನ್ನು ಆರಂಭಿಸಲಾಗಿದೆ ಎಂದರು.

ವಿವಿಯ ಸೆಕ್ಯುರಿಟಿ ಗಾರ್ಡ್‌ಗಳು ಮತ್ತು ಸ್ವಚ್ಚತಾ ಕಾರ್ಮಿಕರಿಗೆ ಉಚಿತವಾಗಿ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ ಹಾಗೂ ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಸಂಕಷ್ಟ ಕಾಲದಲ್ಲಿಯೂ ಯಾವುದೇ ಸಣ್ಣ ತೊಂದರೆಯಾಗದಂತೆ ಪಾಠ-ಪ್ರವಚನ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಆನ್‌ಲೈನ್ ಹಾಗೂ ಭೌತಿಕ ಮಾದರಿಗಳಲ್ಲಿ ಮುನ್ನಡೆಸಲಾಗಿದೆ. ಎನ್‌ಐಆರ್‌ಎಫ್ ರ್‍ಯಾಂಕಿಂಗ್‌ನಲ್ಲಿ ದೇಶದಲ್ಲಿಯೇ 73ನೇ ಸ್ಥಾನದಲ್ಲಿ ಸತತ ಎರಡು ವರ್ಷಗಳಿಂದ ಮುನ್ನಡೆಯುತ್ತಿರುವ ಹೆಮ್ಮೆಯ ಸಾಧನೆ ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ವಿವಿಯ ಸಂಶೋಧನಾ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಯೋಜನೆಗಳನ್ನು ಕ್ಯಗೊಳ್ಳಲಾಗಿದೆ. ಸಹ್ಯಾದ್ರಿ ಕಾಲೇಜಿಗೆ 15 ಕೋಟಿಗೂ ಅಧಿಕ ಅನುದಾನದಲ್ಲಿ ಕಾಲೇಜು ಕಟ್ಟಡ, ಪ್ರಯೋಗಾಲಯ ಅಭಿವೃದ್ಧಿ, ಹಾಸ್ಟೆಲ್‌ಗಳ ನಿರ್ಮಾಣ ಇತ್ಯಾದಿ ಅಭಿವೃದ್ಧಿಯ ಚಟುವಟಿಕೆಗಳನ್ನು ಕೈಗೊಳ್ಳಲು ಸರ್ಕಾರ ಅನುಮೋದನೆ ನೀಡಿದೆ. ಇನ್ನೂ 15 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಪರೀಕ್ಷಾ ತರಬೇತಿ ಕೇಂದ್ರ, ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕುಲಸಚಿವರಾದ ಜಿ. ಅನುರಾಧ ಮಾತನಾಡಿ, ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಸಾಂಸ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಯೋಜನೆಗಳನ್ನು ರೂಪಿಸಲಾಗಿದ್ದು, ಕುಲಪತಿಗಳ ನೇತೃತ್ವದಲ್ಲಿ ಮುಂಬರುವ ದಿನಗಳಲ್ಲಿ ವಿಶ್ವವಿದ್ಯಾಲಯದ ರ್‍ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದರು.

ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್, ಪ್ರಾಧ್ಯಾಪಕರುಗಳಾದ ಪ್ರೊ. ಜಯಣ್ಣ, ಪ್ರೊ. ಜಯರಾಮ್ ಭಟ್ ಸೇರಿದಂತೆ ಹಲವರು ವಿವಿ ಬೆಳವಣಿಗೆಯನ್ನು ಮೆಲುಕುಹಾಕಿದರು. ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಸರ್ಕಾರದ ಮಾರ್ಗಸೂಚಿಯ ಅನ್ವಯ ದೈಹಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಕೋವಿಡ್-19ಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ನಿಯಮಾವಳಿ ಮರೆತು! ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ…

Next Post

ಬೀದರ್: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

kalpa News

kalpa News

Next Post
ಬೀದರ್: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಬೀದರ್: ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL