ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದಲ್ಲಿ ಈಗ ಹಬ್ಬದ ವಾತಾವರಣ. ಜ್ಞಾನಸಹ್ಯಾದ್ರಿ ಆವರಣದಲ್ಲಿ ಕಂಗೊಳಿಸುತ್ತಿವೆ ಬೆಳಕಿನ ತೋರಣ. 1987ರಲ್ಲಿ ಪ್ರಾರಂಭವಾದ ವಿವಿಗೆ 38 ವರ್ಷಗಳ ಸಂಭ್ರಮ. ಇದೇ ಮೊಟ್ಟ ಮೊದಲ ಬಾರಿಗೆ ವಿವಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ವಿವಿಯ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ.
ವಿಶ್ವವಿದ್ಯಾಲಯದಲ್ಲಿ ಜು.2ರ ನಾಳೆ 38ನೇ ಸಂಸ್ಥಾಪನಾ ದಿನಾಚರಣೆ ಆಯೋಜಿಸಲಾಗಿದ್ದು, ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವರುಗಳಾದ ಎ. ಎಲ್. ಮಂಜುನಾಥ್, ಪ್ರೊ. ಎಸ್. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್ ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post