ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಎಲ್ಲ 33 ವಿಭಾಗಗಳಿಗೂ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡಿದ್ದು, ಬಹುತೇಕಎಲ್ಲ ಕೋರ್ಸ್ಗಳ ಮೆರಿಟ್ ಸೀಟುಗಳು ಭರ್ತಿಯಾಗಿವೆ.
ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿಜಿ ಕೇಂದ್ರ, ಚಿಕ್ಕಮಗಳೂರು ಪಿಜಿ ಕೇಂದ್ರ ಮತ್ತು20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ ವಿಭಾಗಗಳಿಗೆ ನವೆಂಬರ್ 27, 28 ಮತ್ತು 29ರಂದು ಪ್ರವೇಶಾತಿಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ.
ಮೊದಲ ದಿನವಾದ ಸೋಮವಾರದಂದು ಮೆರಿಟ್ ಸೀಟುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಯಾವುದೇ ತೊಡಕುಗಳಿಲ್ಲದೆ ನಡೆಯಿತು. 28 ಹಾಗೂ 29ರಂದು ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಪ್ರಕಾರ ಸೋಮವಾರ ಸಂಜೆ4 ಗಂಟೆಯ ಹೊತ್ತಿಗೆ ಎಲ್ಲ ಸ್ನಾತಕೋತ್ತರ ವಿಭಾಗಗಳ ಶೇ.85 ಕ್ಕಿಂತ ಹೆಚ್ಚು ಸೀಟುಗಳು ಭರ್ತಿಯಾಗಿದ್ದವು.
ಕಳೆದ ಬಾರಿಯಂತೆ ವಾಣಿಜ್ಯ ಅಧ್ಯಯನ ಮತ್ತು ರಸಾಯನಶಾಸ್ತ್ರ ವಿಭಾಗಗಳ ಪ್ರವೇಶಾತಿಗಾಗಿ ಅತಿಹೆಚ್ಚು ಅಭ್ಯರ್ಥಿಗಳು ಆಗಮಿಸಿದ್ದು, ಕೌನ್ಸೆಲಿಂಗ್ ಕೇಂದ್ರದ ಮುಂದೆ ಭಾರೀ ವಿದ್ಯಾರ್ಥಿಗಳು ಮತ್ತು ಪೋಷಕರ ಜನಸ್ತೋಮವಿತ್ತು.
ಈ ವರ್ಷಎರಡನೇ ಬಾರಿಗೆ ರಾಜ್ಯಸರ್ಕಾರದ ಕೇಂದ್ರಿಕೃತ ಶೈಕ್ಷಣಿಕ ಪೋರ್ಟಲ್ ಯುಯುಸಿಎಂಎಸ್ ಮೂಲಕ ಪ್ರವೇಶಾತಿ ಅರ್ಜಿ ಹಾಕಲು ಅವಕಾಶ ನೀಡಲಾಗಿದ್ದರೂ ಅಭ್ಯರ್ಥಿಗಳ ಪ್ರತಿಕ್ರಿಯೆ ಉತ್ತಮವಾಗಿದ್ದು, ಪ್ರವೇಶಾತಿ ಪ್ರಕ್ರಿಯೆ ಭರ್ಜರಿಯಾಗಿಯೇ ನಡೆಯಿತು.
Also read: ಬಸ್’ನಲ್ಲೇ ಹೃದಯಾಘಾತ | ತೀರ್ಥಹಳ್ಳಿ ವ್ಯಕ್ತಿ ಮೈಸೂರಿನಲ್ಲಿ ಸಾವು
ಪ್ರವೇಶಾತಿ ಪಡೆದ ಕೋರ್ಸುಗಳ ದಾಖಲಾತಿ ನಿರ್ವಹಣೆ ಹಾಗೂ ಶುಲ್ಕವನ್ನು ಭರಿಸಲು ವಿದ್ಯಾರ್ಥಿಗಳಿಗೆ ಸುಲಭ ಮಾದರಿಗಳಲ್ಲಿ ಅವಕಾಶಗಳನ್ನು ನೀಡಲಾಗಿತ್ತು. ಆಫ್‌ಲೈನ್‌ನಲ್ಲಿ ಶುಲ್ಕ ಭರಿಸುವವರ ಸಂಖ್ಯೆ ಹೆಚ್ಚಾದಂತೆ ಬ್ಯಾಂಕಿನಲ್ಲಿ ಹೆಚ್ಚುವರಿಯಾಗಿ ಮೂರು ಕೌಂಟರ್‌ಗಳನ್ನು ತೆರೆಯಲಾಗಿತ್ತು. ಜೊತೆಗೆ ಭಸವ ಸಭಾಭವನ ಹಾಗೂ ಜೀವವಿಜ್ಞಾನ ಸಮುಚ್ಛಯದಲ್ಲಿ ಕೌಂಟರ್‌ಗಳನ್ನು ತೆರೆದು ಶುಲ್ಕ ಭರಿಸುವ ಪ್ರಕ್ರಿಯೆಯನ್ನು ಸುಲಲಿತಗೊಳಿಸಲಾಯಿತು.
ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಕ್ಕೂ ಹೆಚ್ಚು ಸೀಟು ಆಕಾಂಕ್ಷಿಗಳು ಮತ್ತುಅವರ ಪೋಷಕರುಉತ್ಸುಕತೆಯಿಂದ ಪ್ರವೇಶ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.
ವಿವಿಯ ವಿಭಾಗಗಳನ್ನು ಕಲೆ ಮತ್ತು ಸಮಾಜವಿಜ್ಞಾನ ವಿಷಯಗಳು, ವಾಣಿಜ್ಯ ಮತ್ತು ನಿರ್ವಹಣಾ ವಿಷಯಗಳು, ಅನ್ವಯಿಕ ವಿಜ್ಞಾನಗಳು ಮತ್ತು ಮೂಲ ವಿಜ್ಞಾನಗಳೆಂದು ವಿಂಗಡಿಸಿ ಅನುಕ್ರಮವಾಗಿ ಸಮಾಜ ವಿಜ್ಞಾನ, ವಾಣಿಜ್ಯ ಶಾಸ್ತç ಮತ್ತು ಬಸವ ಭವನ, ಗಣಿತ ವಿಜ್ಞಾನ ಮತ್ತುಜೀವ ವಿಜ್ಞಾನ ವಿಷಯಗಳ ಸಮುಚ್ಚಯಗಳಲ್ಲಿ ಪ್ರವೇಶಾತಿ ಹಮ್ಮಿಕೊಳ್ಳಲಾಗಿತ್ತು.
ವಿಶ್ವವಿದ್ಯಾಲಯಕ್ಕೆ ಆಗಮಿಸುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿವಿಯದ್ವಾರದ ಬಳಿಯೇ ವಿಭಾಗವಾರು ಕೌನ್ಸೆಲಿಂಗ್ ಕಟ್ಟಡದ ವಿವರ, ಮಾರ್ಗತೋರುವ ಸೂಚನಾ ಫಲಕಗಳು, ಅಗತ್ಯ ದಾಖಲೆಗಳ ವಿವರ ಸೇರಿದಂತೆ ಸ್ವಾಗತಕೋರುವ ಫಲಕಗಳನ್ನು ಹಾಕಲಾಗಿತ್ತು. ಜೊತೆಗೆ ಪ್ರತಿಕಟ್ಟಡದ ಬಳಿಯೂ ಪೂರಕ ಮಾಹಿತಿ ನೀಡಲಾಗಿತ್ತು.
ಸೀಟುಗಳ ವಿವಿರ, ವಿದ್ಯಾರ್ಥಿ ಮಾಹಿತಿ, ಕಾಲೇಜು ಆಯ್ಕೆ ಕುರಿತ ಮಾಹಿತಿಗಳನ್ನು ಯಾವುದೇ ಗೊಂದಲಗಳಿಗೆ ದಾರಿಯಾಗದಂತೆ ಡಿಜಿಟಲ್ ಬೋರ್ಡ್ಗಳಲ್ಲಿ ಪ್ರದರ್ಶಿಸಲಾಗುತ್ತಿತ್ತು. ಮೈಕ್ ಮೂಲಕ ಆಯ್ಕೆಗೊಂಡವರ ಹೆಸರುಗಳನ್ನು ಘೋಷಿಸಲಾಗುತ್ತಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post