ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ America Stanford University ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ Kuvempu University ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಮೂರನೇಯ ವರ್ಷ ಸ್ಥಾನ ಪಡೆದಿದ್ದಾರೆ.
ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಅಯೋನ್ನಿಡಿಸ್ ಅಕ್ಟೋಬರ್ 04ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. 02ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.

Also read: ಹಾರಂಗಿ ಜಲಾಶಯದಲ್ಲಿ ಜಲ ಕ್ರೀಡೆ ಶೀಘ್ರ ಆರಂಭ | ಪ್ರವಾಸಿಗರಿಗೆ ಥ್ರಿಲ್ ನೀಡಲು ಸಿದ್ದ
2023ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 40,686ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣ ತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.

ಸ್ಟಾನ್‌ಫೋರ್ಡ್ ವಿವಿಯ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಈ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಇದು ವಿಶ್ವವಿದ್ಯಾಲಯದ ಅಧ್ಯಾಪಕರ ಶೈಕ್ಷಣ ಕ ಗುಣಮಟ್ಟ ಮತ್ತು ಸಂಶೋಧನಾ ಚಟುವಟಿಕೆಗಳ ಸ್ಥಿರತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಪ್ರಭಾರ ಕುಲಪತಿ ಪ್ರೊ. ಎಸ್. ವೆಂಕಟೇಶ್ ಪ್ರತಿಕ್ರಿಯಿಸಿದ್ದಾರೆ.











Discussion about this post