ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿವಿ Kuvempu University ದೂರಶಿಕ್ಷಣ ವಿಭಾಗದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವ ವಿಶ್ವವಿದ್ಯಾಲಯ 2019 ಮತ್ತು 20ನೇ ಸಾಲಿನ ಯುಜಿ ಹಾಗೂ ಪಿಜಿ ಕೋರ್ಸ್‌ಗಳಿಗೆ ಪರೀಕ್ಷೆಗಳು ಮೇ 26ರಿಂದ ನಡೆಯಬೇಕಿತ್ತು. ಆದರೆ ಕೆಲ ವಿದ್ಯಾರ್ಥಿಗಳು ಇದನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ಮೇಟ್ಟಿಲೇರಿರುವ ಹಿನ್ನೆಲೆಯಲ್ಲಿ ಸೂಚನೆಯಂತೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ನ್ಯಾಯಾಲಯದ ಸೂಚನೆ ಹಾಗೂ ನಿರ್ಧಾರವನ್ನು ಆಧರಿಸಿ ಮುಂದಿನ ಪರೀಕ್ಷಾ ದಿನಾಂಕವನ್ನು ಮರು ಪ್ರಕಟಿಸಲಾಗುವುದು ಎಂದು ವಿವಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post