ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಶಿರಸಿ ಮೂಲದ ಸ್ಕಾಡ್‌ವೆಸ್ ಸರ್ಕಾರೇತರ ಸಂಸ್ಥೆ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ 11 ವಿದ್ಯಾರ್ಥಿಗಳಿಗೆ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇಮಕಾತಿ ಆದೇಶವನ್ನು ವಿತರಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪ್ರಾಜೆಕ್ಟ್ ಸಂಯೋಜಕರಾಗಿ ಓರ್ವ ಅಭ್ಯರ್ಥಿ ಮತ್ತು ಸಮುದಾಯ ಅಭಿವೃದ್ಧಿ ಅಧಿಕಾರಿ ಹುದ್ದೆಗೆ 10 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಯಿತು.
ಕುಲಸಚಿವರಾದ ಜಿ. ಅನುರಾಧ, ವಿಭಾಗದ ಮುಖ್ಯಸ್ಥ ಪ್ರೊ. ಎ. ರಾಮೇಗೌಡ, ಡಾ. ಕೆ. ಆರ್. ಮಂಜುನಾಥ್, ಸ್ಕಾಡ್‌ವೆಸ್ ಸಂಸ್ಥೆಯ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post