No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

2021ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 81ನೇ ರ್‍ಯಾಂಕ್

kalpa News by kalpa News
September 11, 2021
in ಶಿವಮೊಗ್ಗ
0
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್‍ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 81ನೇ ರ್‍ಯಾಂಕ್ ಗಳಿಸುವುದರೊಂದಿಗೆ ಸತತ ನಾಲ್ಕನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ.


ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ್‍ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 40.40 ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ 81ನೇ ಸ್ಥಾನ ಪಡೆದಿದೆ. 2017ರಲ್ಲಿ 150ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 81ನೇ ರ್‍ಯಾಂಕ್ ಪಡೆಯುವುದರೊಂದಿಗೆ, ಕೋವಿಡ್-19 ಕಾರಣದಿಂದ ಉನ್ನತ ಶಿಕ್ಷಣದ ಚಟುವಟಿಕೆಗಳಿಗೆ ಹಿನ್ನೆಡೆಯಾಗಿದ್ದರೂ, ಟಾಪ್ 100ರೊಳಗೆ ಸ್ಥಾನ ಪಡೆದುಕೊಂಡಿದೆ.


ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಎಂಜಿನಿಯರಿಂಗ್‌ನಂತಹ ವೃತ್ತಿಪರ ಕೋರ್ಸ್‌ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶಾದ್ಯಂತ (4,100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 19 ಮತ್ತು 69ನೇ ರ್‍ಯಾಂಕ್ ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.
ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ್‍ಯಾಂಕಿಂಗ್ ಪ್ರಾರಂಭಿಸಿದ್ದು, ಈಗ ಆರನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ವೈದ್ಯಕೀಯ, ವಾಸ್ತುಶಿಲ್ಪ, ಕಾನೂನು ವಿ?ಯಗಳ ಶಿಕ್ಷಣ ಸಂಸ್ಥೆಗಳ ಜೊತೆಗೆ ವಿಶ್ವವಿದ್ಯಾಲಯಗಳ ಶ್ರೇಣೀಕರಣವನ್ನು ಎನ್‌ಐಆರ್‌ಎಫ್ ಅಡಿಯಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರತಿ ವರ್ಷ ಕೈಗೊಳ್ಳುತ್ತದೆ.


ವಿಶ್ವವಿದ್ಯಾಲಯದ ರ್‍ಯಾಂಕಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, ಕೋವಿಡ್-19ನಂತಹ ಮಹಾಮಾರಿಯು ದೇಶದ ಶೈಕ್ಷಣಿಕ ರಂಗವನ್ನು ತೀವ್ರವಾಗಿ ಭಾಧಿಸುತ್ತಿದ್ದರೂ, ವಿಶ್ವವಿದ್ಯಾಲಯದ ಅಧ್ಯಾಪಕರು ಗುಣಮಟ್ಟದ ಸಂಶೋಧನೆ, ಪ್ರಕಟಣೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಮುಂದುವರೆಸಿರುವುದರ ಮೂಲಕ ಶೈಕ್ಷಣಿಕ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಮುಂಬರುವ ದಿನಗಳಲ್ಲಿ ರ್‍ಯಾಂಕಿಂಗ್ ಉತ್ತಮಪಡಿಸುವ ನಿಟ್ಟಿನಲ್ಲಿ ಸರ್ವಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.


ಕುಲಸಚಿವರಾದ ಜಿ. ಅನುರಾಧ ಪ್ರತಿಕ್ರಿಯಿಸಿ, ‘ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸ್ಪರ್ಧಿಸಿ ಗ್ರಾಮೀಣ ಭಾಗದ ಸರ್ಕಾರಿ ಸಂಯೋಜಿತ ವಿಶ್ವವಿದ್ಯಾಲಯವೊಂದು ಸತತ ನಾಲ್ಕು ವರ್ಷಗಳಿಂದ ನೂರರ ಪಟ್ಟಿಯೊಳಗೆ ಸ್ಥಾನ ಪಡೆಯುತ್ತಾ ಬಂದಿರುವುದು ಒಟ್ಟಾರೆ ವಿಶ್ವವಿದ್ಯಾಲಯದ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಿರುವುದಕ್ಕೆ ರಾಷ್ಟ್ರಮಟ್ಟದ ಮನ್ನಣೆ ಲಭಿಸಿರುವುದು ಸಂತಸದ ವಿಷಯ’ ಎಂದಿದ್ದಾರೆ.

ಎನ್‌ಐಆರ್‌ಎಫ್ ರ್‍ಯಾಂಕಿಂಗ್ ಮಾನದಂಡಗಳು:
ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್‍ಯಾಂಕಿಂಗ್ ಫ್ರೇಂವರ್ಕ್ ಐದು ಪ್ರಮುಖ ಮಾನದಂಡಗಳ ಆಧಾರದ ಮೇಲೆ ಶ್ರೇಣೀಕರಣ ನೀಡುತ್ತದೆ. ರ್‍ಯಾಂಕಿಂಗ್‌ಗೆ ಒಳಪಡುವ ಶೈಕ್ಷಣಿಕ ಸಂಸ್ಥೆಗಳಲ್ಲಿನ ಬೋಧನೆ, ಕಲಿಕೆಗಾಗಿ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳ ಸೌಲಭ್ಯ, ಸಂಸ್ಥೆಗಳಲ್ಲಿ ನಡೆಯುತ್ತಿರುವ ಸಂಶೋಧನೆ ಮತ್ತು ವೃತ್ತಿಪರ ಚಟುವಟಿಕೆಗಳು, ಕೋರ್ಸ್‌ಗಳ ಮೂಲಕ ಸಂಸ್ಥೆ ಸೃಷ್ಟಿಸುತ್ತಿರುವ ಉದ್ಯೋಗಾವಕಾಶ ಮತ್ತು ಪರೀಕ್ಷೆಯ ಉತ್ತೀರ್ಣದ ಪ್ರಮಾಣ ಸೇರಿದಂತೆ ಉನ್ನತ ಶಿಕ್ಷಣದ ಫಲಿತಾಂಶ, ಶೈಕ್ಷಣಿಕ ಸಂಸ್ಥೆಯ ಮೂಲಕ ನಡೆಯುತ್ತಿರುವ ವಿಸ್ತರಣೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯ ಚಟುವಟಿಕೆಗಳು ಮತ್ತು ಸಂಸ್ಥೆಯ ಕುರಿತು ಸಿಬ್ಬಂದಿ, ಸಂಶೋಧಕರು, ಸಾರ್ವಜನಿಕರ ಗ್ರಹಿಕೆ ಮತ್ತು ಅಭಿಪ್ರಾಯ, ಈ ಐದು ಮಾನದಂಡಗಳ ಮೂಲಕ ಮೌಲ್ಯಮಾಪನ ಮಾಡಿ ಶ್ರೇಣೀಕರಣ ನೀಡಲಾಗುತ್ತದೆ.

ರಾಜ್ಯದ ಉನ್ನತ ಶಿಕ್ಷಣದ ಶೈಕ್ಷಣಿಕ ಸಂಸ್ಥೆಗಳ ಪೈಕಿ ಕುವೆಂಪು ವಿಶ್ವವಿದ್ಯಾಲಯ ೭ನೇ ಸ್ಥಾನ ಪಡೆದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (7), ಮೈಸೂರು ವಿಶ್ವವಿದ್ಯಾಲಯ (19), ಮೈಸೂರಿನ ಜೆ.ಎಸ್.ಎಸ್. ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಂಡ್ ರಿಸರ್ಚ್ (34), ಬೆಂಗಳೂರು ವಿಶ್ವವಿದ್ಯಾಲಯ (69), ಮಂಗಳೂರಿನ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾಲಯ (77) ಸ್ಥಾನ ಪಡೆದಿವೆ. ಇನ್ನುಳಿದಂತೆ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ (82), ಬೆಳಗಾವಿಯ ಕೆಎಲ್‌ಈ ಸಂಸ್ಥೆ (91) ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ (99) ಟಾಪ್ 100ರಲ್ಲಿರುವ ಕರ್ನಾಟಕದ ಇತರೆ ಶೈಕ್ಷಣಿಕ ಸಂಸ್ಥೆಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೌರಸಮುದ್ರ ಮಾರಮ್ಮ ದೇವಿಯ ಹುಂಡಿ ಎಣಿಕೆ: ಎಷ್ಟು ಹಣ ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ…

Next Post

ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

kalpa News

kalpa News

Next Post
ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL