ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಹಸಿರು ಕ್ರಾಂತಿಯ ಹರಿಕಾರಡಾ. ಬಾಬು ಜಗಜೀವನ್‌ರಾಮ್ Babu Jagajeevan Ram ಕುರಿತು ಮಾ. 9ರಂದು ಕುವೆಂಪು ವಿವಿಯಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನುಆಯೋಜಿಸಲಾಗಿದೆ.
ವಿವಿಯ ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ 10.30 ಕ್ಕೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ರಾಮ್ ವಿಚಾರ ಸಂಬಂಧ ಒಂದು ದಿನದ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಲಸಚಿವೆ ಜಿ ಅನುರಾಧ ಉಪಸ್ಥಿತರಿರಲಿದ್ದಾರೆ.
Also read : ಉದ್ಯಮಿ ಮಥುರಾ ಗೋಪಿನಾಥ್ ರಿಗೆ ಶುಭಹಾರೈಕೆ
ಉದ್ಘಾಟನಾ ಕಾರ್ಯಕ್ರಮದ ನಂತರ ವಿಚಾರ ಸಂಕಿರಣದಲ್ಲಿ ಎರಡು ಗೋಷ್ಠಿಗಳು ನಡೆಯಲಿವೆ. ಬೆಂಗಳೂರು ವಿವಿಯ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗಂಗಾಧರ ಹಸಿರು ಕ್ರಾಂತಿಯ ಹರಿಕಾರಡಾ. ಬಾಬು ಜಗಜೀವನ್ ರಾಮ್ ವಿಷಯ ಕುರಿತು, ಕನ್ನಡ ಭಾರತಿಯ ಡಾ. ನೆಲ್ಲಿಕಟ್ಟೆ ಸಿದ್ದೇಶ್ ಕೃಷಿ ಸಚಿವರಾಗಿಡಾ. ಬಾಬು ಜಗಜೀವನ್ ರಾಮ್ ಅವರ ಪಾತ್ರ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದು ಕುವೆಂಪು ವಿವಿಯ ಡಾ. ಬಾಬು ಜಗಜೀವನ್‌ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ಸತ್ಯಪ್ರಕಾಶ್ ಎಂ ಆರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post