ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವುದರ ಮೂಲಕ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ, ಸಹಬಾಳ್ವೆ, ತಾಳ್ಮೆ ಮುಂತಾದ ಸದ್ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕುವೆಂಪು ವಿಶ್ವವಿದ್ಯಾಲಯ Kuvempu University ಹಣಕಾಸು ಅಧಿಕಾರಿ ಪ್ರೊ. ವೈ. ಎಲ್. ರಾಮಚಂದ್ರ ಹೇಳಿದರು.
ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 2023ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಎನ್‌ಎಸ್‌ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವೂ ವಿದ್ಯಾರ್ಥಿಯಾಗಿದ್ದಾಗ ಎನ್‌ಎಸ್‌ಎಸ್ ಸ್ವಯಂಸೇವಕನಾಗಿದ್ದೆ. ನಾವು ಎನ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ, ಶಿಬಿರಗಳಲ್ಲಿ ಭಾಗವಹಿಸುವಾಗ ಯಾವುದೇ ಜಾತಿ, ಧರ್ಮ, ಮತ, ಬಡವ, ಶ್ರೀಮಂತ ಎಂಬ ಬೇಧ ಭಾವಗಳು ನನ್ನನ್ನು ಭಾಧಿಸಲಿಲ್ಲ ಎಂದರು.

Also read: ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಾಘ್ನಿ, ವಿವಾನ್‌ಗೆ ಬೆಳ್ಳಿ ಪದಕ
ಅಧ್ಯಕ್ಷತೆ ವಹಿಸಿದ್ದ ಎಸ್‌ಎಂಆರ್ ಕಾಲೇಜಿನ ಪ್ರಾಂಶುಪಾಲ ಧರ್ಮೇಗೌಡ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿಯುತ್ತಾರೆ ಮತ್ತು ಸಾಮಾಜಿಕ ಪಿಡುಗಗಳನ್ನು ತೊಡೆದು ಹಾಕಲು ಶ್ರಮಿಸುತ್ತಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post