No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿ ದೂರಶಿಕ್ಷಣದ ಫಲಿತಾಂಶಕ್ಕೆ ಸಂಬಂಧಿಸಿದ ಸ್ಪಷ್ಟೀಕರಣ

kalpa News by kalpa News
February 24, 2022
in ಶಿವಮೊಗ್ಗ
0
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

2019-20ನೇ ಸಾಲಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಕೋರ್ಸ್‌ಗಳಿಗೆ #Kuvempu University Distance Education ನೊಂದಣಿಯಾಗಿದ್ದ ವಿದ್ಯಾರ್ಥಿಗಳಿಗೆ ಕೋವಿಡ್-19 #Covid-19 ಕಾರಣದಿಂದ ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಅವರೆಲ್ಲರೂ ತೀವ್ರ ಹತಾಶೆಗೊಳಗಾಗಿದ್ದು, ಪ್ರಾಣಹಾನಿಯ ಸಂಭವವನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ 2000 ನಿಯಮ 15 (5)ರಲ್ಲಿ ಕುಲಪತಿಗಳಿಗೆ ಪ್ರದತ್ತವಾದ ಅಧಿಕಾರವನ್ನು ಬಳಸಿ ಫಲಿತಾಂಶ ಪ್ರಕಟಿಸಲಾಗಿದೆ. ಇದರಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಕೋವಿಡ್ ಕಾರಣದಿಂದ ಇದುವರೆವಿಗೂ ಪರೀಕ್ಷೆ ನಡೆಸಲು ಸಾಧ್ಯವಾಗದಿರುವುದರಿಂದ ಶೈಕ್ಷಣಿಕ ಅವಧಿ ಮೀರುತ್ತಿದೆ. ಇದರಿಂದ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಅಡಚಣೆಯಾಗಬಾರದೆಂಬ ಸದುದ್ದೇಶದಿಂದ ಯುಜಿಸಿ #UGC ಮಾರ್ಗಸೂಚಿ, ಉನ್ನತ ಶಿಕ್ಷಣ ಇಲಾಖೆಯ ಆದೇಶ, ಮತ್ತು ಉಚ್ಛ ನ್ಯಾಯಾಲಯದ ಕಾನೂನು ಸಲಹೆಗಾರರ ವರದಿಯನ್ನಾಧರಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಅನುಮಾನ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಜನವರಿ 13ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ ಅನುಸರಿಸುತ್ತಿರುವ ಮಾದರಿಯನ್ನೇ ಮುಂದುವರೆಸಲು ಪತ್ರ ಬರೆದಿದ್ದಾರೆ. ಇನ್ನು ಮೈಸೂರು ವಿವಿ, ಮಂಗಳೂರು ವಿವಿ, ಕರ್ನಾಟಕ ರಾಜ್ಯ ಮುಕ್ತ ವಿವಿಗಳು, ಆಂತರಿಕ ಅಂಕಗಳ ಆಧಾರದ ಮೇಲೆ ದೂರಶಿಕ್ಷಣದ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪ್ರಮೋಟ್ ಮಾಡಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕುವೆಂಪು ವಿಶ್ವವಿದ್ಯಾಲಯ ಕೂಡ ಕರ್ನಾಟಕ ಉಚ್ಛ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಸ್ನಾತಕ ಪದವಿಯ ಪ್ರಥಮ ಮತ್ತು ದ್ವಿತೀಯ ವರ್ಷದ ಫಲಿತಾಂಶವನ್ನು ಮಾತ್ರ ಪ್ರಕಟಿಸಿದೆ. ಉಳಿದಂತೆ ಎಲ್ಲಾ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Also read: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ


ಪ್ರಸ್ತುತ ಪ್ರಕಟಿಸಲಾದ ಫಲಿತಾಂಶದಲ್ಲಿ 2007 ವಿದ್ಯಾರ್ಥಿಗಳ ಫಲಿತಾಂಶವನ್ನು ನಿರ್ದಿಷ್ಟ ಕಾರಣಗಳಿಗಾಗಿ ತಡೆಹಿಡಿಯಲಾಗಿದೆ. ದೂರ ಶಿಕ್ಷಣ ವಿದ್ಯಾರ್ಥಿಗಳ ಎಲ್ಲಾ ಆಂತರಿಕ ಕಿರು ಪುಸ್ತಕಗಳನ್ನು ರೆಗ್ಯುಲರ್ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆಯೇ ಪರಿಕ್ಷಾ ಮಂಡಳಿಯ ಅಧ್ಯಕ್ಷರು, ಮತ್ತು ಸದಸ್ಯರು ಅತ್ಯಂತ ಶಿಸ್ತು ಮತ್ತು ಜವಾಬ್ದಾರಿಯಿಂದ ಮೌಲ್ಯಮಾಪನ ಮಾಡಿದ್ದಾರೆ. ಫಲಿತಾಂಶದ ಬಗ್ಗೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ತಳೆದಿರುವ ಅಭಿಪ್ರಾಯ ಸರ್ಕಾರದ ಆದೇಶ ಮತ್ತು ಯುಜಿಸಿ ನಿರ್ದೇಶನಕ್ಕೆ ಅನುಗುಣವಾಗಿರುವುದಿಲ್ಲ. ಹೀಗಾಗಿ ಸಾರ್ವಜನಿಕರು ಗೊಂದಲ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19Health News in KannadaKannada NewsKannada News LiveKannada News OnlineKannada News WebsiteKannada WebseriesKuvempu University Distance EducationLatest News KannadaLocal NewsNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಕೋರ್ಸ್‌ಕೋವಿಡ್-19ಶಂಕರಘಟ್ಟ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

Next Post

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

kalpa News

kalpa News

Next Post
ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL