ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ದಲಿತರ ವಿರುದ್ಧ ಎಸಗುವ ಕ್ರೌರ್ಯಗಳಿಗೆ ಪ್ರತಿಕ್ರಿಯಿಸುವುದು ಅಥವಾ ಸಹಾಯ ಮಾಡಲು ಮುಂದಾಗುವುದು ದೊಡ್ಡದಲ್ಲ. ಅಂತಹ ಕ್ರೌರ್ಯಗಳು ನಡೆಯದಂತೆ ನೋಡಿಕೊಳ್ಳುವುದು ದೊಡ್ಡದು. ಎಲ್ಲರನ್ನೂ ವಿಚಾರವಂತರಾಗುವಂತೆ ಮಾಡುವಂಥದ್ದು ದೊಡ್ಡದು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ Prof. Sharath Ananthamurthy ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರ ಮತ್ತು ಕನ್ನಡ ಭಾರತಿಯ ಸಹಯೋಗದಲ್ಲಿ ಬುಧವಾರ ಪ್ರೊ.ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ 50ನೇ ವರ್ಷಾಚರಣೆ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಇಂದಿರಾ ಕೃಷ್ಣಪ್ಪ, ಜಾತಿ, ಅಸ್ಪೃಶ್ಯತೆ, ಅಸಮಾನತೆ, ಲಿಂಗ ತಾರತಮ್ಯ, ಮೂಢನಂಬಿಕೆ, ಕಂದಾಚಾರ ಮತ್ತಿತರ ಕೊಳಕುಗಳನ್ನು ನಿವಾರಿಸಿ ಸಮ ಸಮಾಜ ನಿರ್ಮಾಣ ಮಾಡಲು ಹೋರಾಟದಿಂದ ಮಾತ್ರ ಸಾಧ್ಯ ಎಂದು ಅರಿತು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟು ಹಾಕಿದವರು ಪ್ರೊ. ಕೃಷ್ಣಪ್ಪ ಎಂದರು.

ಪ್ರೊ. ಕೃಷ್ಣಪ್ಪ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ದೇವಿದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಜಿ.ಬಂಗಾರಪ್ಪ, ದಸಂಸಂ ರಾಜ್ಯ ಸಂಚಾಲಕ ಗುರುಮೂರ್ತಿ, ಡಾ. ಡೋಮಿನಿಕ್, ಪ್ರೊ.ಪ್ರಶಾಂತ್ ನಾಯಕ್, ಪ್ರೊ.ಎಸ್. ಚಂದ್ರಶೇಖರ್, ಪ್ರೊ.ಬಿ.ಎಂ. ಪುಟ್ಟಯ್ಯ, ಪ್ರೊ.ಗುರುಲಿಂಗಯ್ಯ, ಡಾ.ನೆಲ್ಲಿಕಟ್ಟೆ ಸಿದ್ದೇಶ್ ಮತ್ತಿರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post