No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ: ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ

ಕುವೆಂಪು ವಿವಿಯಲ್ಲಿ ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ ವಿಷಯದ ಮೇಲಿನ ವಿಚಾರ ಸಂಕಿರಣ

kalpa News by kalpa News
April 6, 2022
in ಶಿವಮೊಗ್ಗ
0
ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ: ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖಿಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ Manjamma Jogathi ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರೊ. ಎಸ್. ಪಿ. ಹೀರೆಮಠ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ನೇ ಜನ್ಮದಿನಾಚರಣೆ ಹಾಗೂ ‘ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ’ ವಿಷಯ ಕುರಿತ ಎರಡು ದಿನದ ರಾಷ್ಟೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಮಾನತೆಯನ್ನು ತರುವುದು ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಚಿಂತನೆಗಳಾಗಿದ್ದವು. ಅದರಂತೆ ನಡೆಯುವುದೇ ಸಂವಿಧಾನ ಮತ್ತು ಅವರುಗಳಿಗೆ ನಾವು ನೀಡಬಹುದಾದ ಗೌರವ. ದಲಿತರು, ದಮನಿತರು, ಅಂಚಿನಲ್ಲಿರುವ ಸಮುದಾಯಗಳಾದ ನಮಗೆ ಅನುಕಂಪ ಬೇಡ. ಶಿಕ್ಷಣ ಮತ್ತು ದುಡಿಯುವ ಅವಕಾಶಗಳನ್ನು ನೀಡಿ. ಉತ್ತಮವಾದ ಶಿಕ್ಷಣಕ್ಕೆ ಸಮಾಜದಲ್ಲಿ ಸಮಾನತೆ ತರುವ ಶಕ್ತಿಯಿದೆ. ಅಸಾಧ್ಯ ಎಂದು ಯಾರೂ ಹಿಂದುಳಿಯಬಾರದು; ಬದುಕುವ ಮಾರ್ಗಸರಿಯಿದ್ದರೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

Also read: ಏ.6ರಂದು ಸುರಭಿ ಗೋಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯ ಲೋಕಾರ್ಪಣೆ

ವಿಚಾರ ಸಂಕಿರಣದ ದಿಕ್ಸೂಚಿ ನುಡಿಗಳನ್ನಾಡಿದ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಕೆ ಎಮ್ ಮೇತ್ರಿ, ಸಾಮಾಜಿಕ ನ್ಯಾಯದ ಮೂಲಕ ಬುಡಕಟ್ಟು ಸಮುದಾಯಗಳೂ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಜನರಿಗೆ ಧೀರ್ಘಕಾಲಿಕ ಯೋಜನೆಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ನಿರ್ಲಕ್ಷಿತರಿಗೆ ಶಿಕ್ಷಣ, ಉದ್ಯೋಗವನ್ನು ನೀಡಬೇಕು. ನಿರ್ಲಕ್ಷಿತರ ಮೇಲೆ ಅಧ್ಯಯನ ಮಾಡಿ ಸಮಾಜದ ಮುಂದೆ ಅವರ ಸಮಸ್ಯೆಗಳನ್ನು ಪ್ರಸ್ತುತಪಡಿಸುವಂತಹ ಕಾರ್ಯಕ್ರಮಗಳು ಜರುಗಬೇಕು. ಅಲಕ್ಷಿತ ಸಮಾಜದ ಜನರ ವಿಶಿಷ್ಟ ಜೀವನ ಶೈಲಿಗಳು, ಸಂಸ್ಕೃತಿಗಳನ್ನು ಅಧ್ಯಯನಿಸಿ ಅರಿಯಬೇಕು, ಗೌರವಿಸಬೇಕು ಆ ಮೂಲಕ ಸರ್ಕಾರದ ನೀತಿ ನಿರೂಪಣೆಗಳಲ್ಲಿ ಅವುಗಳು ಬಿಂಬಿತವಾಗುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಡಾ. ಬಾಬು ಜಗಜೀವನ್ ರಾಮ್ ಅವರು ಕೃಷಿ, ಕಾರ್ಮಿಕ, ವಿಮಾನಯಾನ, ರಕ್ಷಣೆ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸವಾಲುಗಳಿದ್ದಾಗ ವಹಿಸಿಕೊಂಡು ಯಶಸ್ವಿಯಾಗಿ ನಿರ್ವಹಿಸಿ ಮೇಲ್ಪಂಕ್ತಿ ಹಾಕಿಕೊಟ್ಟವರು. ಅಂತಹವರ ಆಲೋಚನೆಗಳು ಸಾಮಾನ್ಯ ಕೂಲಿ ಕಾರ್ಮಿಕನಿಂದಿಡಿದು ಎಲ್ಲ ವರ್ಗಗಳ ಅಭಿವೃದ್ಧಿ ಆಶಯಗಳಿಗೆ ಪೂರಕವಾಗಿರುವುದನ್ನು ಕಂಡಿದ್ದೇವೆ. ಆದಕಾರಣ ಅವರ ಅಧ್ಯಯನ ಪ್ರಸ್ತುತದ ಅಂಚಿನ ಸಮುದಾಯಗಳ ಅಭಿವೃದ್ಧಿಗೆ ದಾರಿದೀವಿಗೆಯಾಗಬಲ್ಲದು ಎಂದು ಆಶಿಸಿದರು.

ಮಂಗಳ ಮುಖಿಯರನ್ನು ಅನುಕಂಪದಿಂದ ನೋಡಬೇಡಿ; ಬದಲಿಗೆ ಅವಕಾಶ ನೀಡಿ ಸಮಾಜದ ಮುಖ್ಯವಾಹಿನಿಗೆ ತನ್ನಿ. ಹೆಣ್ಣಿನ ಆತ್ಮ, ಗಂಡಿನ ಶಕ್ತಿಯನ್ನು ಹೊಂದಿರುವ ನಾವು, ಎಲ್ಲ ಕೆಲಸವನ್ನು ಮಾಡಲು ತಯಾರಿದ್ದೇವೆ. ಮಂಗಳಮುಖಿ ಸಮುದಾಯವನ್ನು ರಕ್ಷಿಸುವುದರ ಜೊತೆಗೆ ಹೆಚ್ಚು ಮೀಸಲಾತಿ ನೀಡಿ ಎಂದು ಮಾತನಾಡುತ್ತ ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮ ಕೆಲಕ್ಷಣ ಭಾವುಕರಾದರು ಮತ್ತು ಈ ದೃಶ್ಯಕ್ಕೆ ಸಾಕ್ಷಿಯಾದ ಸಭಿಕರ ಕಣ್ಣಾಲಿಗಳು ತುಂಬಿಬಂದವು.
-ಬಿ. ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು


ಕಾರ್ಯಕ್ರಮದಲ್ಲಿ ಖ್ಯಾತ ಜನಪದ ಗಾಯಕ ಜೋಗಿಲ ಸಿದ್ಧರಾಜು ಅವರು ಜನಪದ ಗೀತೆಯೊಂದನ್ನು ಹಾಡಿ ಸಭಿಕರನ್ನು ರಂಜಿಸಿದರು. ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕಮಾರ್ ಎಸ್. ಕೆ., ಈ ದಿನ ಡಾಟ್ ಕಾಂ ವೆಬ್‌ತಾಣದ ಸುದ್ದಿ ಸಂಪಾದಕ ಬಿ ವಿ ಶ್ರೀನಾಥ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕ ಡಾ. ಸತ್ಯಪ್ರಕಾಶ್ ಎಮ್. ಆರ್. ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ವಿವಿಗಳ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.

ಡಾ. ಅರುಣ್ ಜೋಳದ ಕೂಡ್ಲಿಗಿ ಅವರು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು. ನಂತರ ಸಂಶೋಧನಾರ್ಥಿಗಳು ಮತ್ತು ಉಪನ್ಯಾಸಕರು ಸಮಾವೇಶದ ವಿವಿಧ ಉಪವಿಷಯಗಳ ಮೇಲೆ ಪ್ರಬಂಧಗಳನ್ನು ಮಂಡಿಸಿದರು.

ಪುಸ್ತಕ ಬಿಡುಗಡೆ: 
ಕಾರ್ಯಕ್ರಮದಲ್ಲಿ ಹಾವೇರಿಯ ಕರ್ನಾಟಕ ಜಾನಪದ ವಿವಿಯ ಅಧ್ಯಾಪಕ ಡಾ. ಅರುಣ್ ಜೋಳದ ಕೂಡ್ಲಿಗಿ ಅವರು ‘ಸಂಸತ್ತಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಭಾಷಣಗಳು- ಸಂ ೧ ರಕ್ಷಣೆ’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಪುಸ್ತಕದ ಪ್ರಸ್ತುತತೆ ಮತ್ತು ವಸ್ತುನಿಷ್ಠತೆ ಕುರಿತು ವಿಜಯ ಕರ್ನಾಟಕದ ಹಿರಿಯ ಪತ್ರಕರ್ತ ಬಿ ಎನ್ ಅನಿಲ್ ಕುಮಾರ್ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsManjamma JogathiNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಂಜಮ್ಮ ಜೋಗತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.6ರಂದು ಸುರಭಿ ಗೋಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯ ಲೋಕಾರ್ಪಣೆ

Next Post

ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

kalpa News

kalpa News

Next Post
ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL