ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಶಿಕ್ಷಕೇತರ ನೌಕರರ ಒಕ್ಕೂಟದ ಉಪಾಧ್ಯಕ್ಷರಾಗಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ವಿಶ್ವವಿದ್ಯಾಲಯದ ಎಂ. ಸಿದ್ದರಾಮ ಪ್ರಧಾನ ಕಾರ್ಯದರ್ಶಿಯಾಗಿ, ಎಸ್. ಅಬ್ದುಲ್ ಅಲಿ ಕಾರ್ಯದರ್ಶಿಯಾಗಿ ಮತ್ತು ನಿರ್ದೇಶಕರಾಗಿ ಡಿ. ಕೃಷ್ಣ, ಸುಶೀಲ ಎನ್, ರೇಖಾ ಎಚ್ ಎಸ್ ಆಯ್ಕೆಯಾಗಿದ್ದಾರೆ.
ಇನ್ನು ಸಂಘದ ಅಧ್ಯಕ್ಷರಾಗಿ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಬಿ.ಶ್ರೀಕಾಂತ್ ಮತ್ತು ಕಾರ್ಯಾಧ್ಯಕ್ಷರಾಗಿ ಬೆಂಗಳೂರು ವಿ.ವಿಯ ಎಚ್. ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಕಳೆದ ಶನಿವಾರ ನಡೆದ ರಾಜ್ಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಮಿತಿಯ ಕಾರ್ಯಾವಧಿ ಮೂರು ವರ್ಷಗಳವರೆಗೆ ಇರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post