ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ನೂತನ ಶಿಕ್ಷಣ ನೀತಿಯಿಂದ New Education Policy ಪ್ರಾಣ ಶಾಸ್ತ್ರಕ್ಕೆ ವಿಶೇಷವಾದ ಪ್ರಾಮುಖ್ಯತೆ ಇದ್ದು, ಪಶು ಸಂಗೋಪನೆ, ಮೀನುಗಾರಿಕೆ, ಮತ್ತಿತರ ವಿಷಯಗಳ ಬಗ್ಗೆ ಪ್ರಾಯೋಗಿಕವಾಗಿ ಕಲಿಯುವ ಅವಕಾಶ ವಿದ್ಯಾರ್ಥಿಗಳಿಗೆ ಇದೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಕೆ. ಸೈದಾಪುರ್ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಅನ್ವಯಿಕ ಪ್ರಾಣ ಶಾಸ್ತ್ರ ವಿಭಾಗವು ಸೋಮವಾರದಂದು ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ‘ಜೀವಶಾಸ್ತ್ರದ ಹೊಸ ಆಯಾಮಗಳು’ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುವೆಂಪು ವಿಶ್ವವಿದ್ಯಾಲಯದ ಅನ್ವಯಿಕ ಪ್ರಾಣ ಶಾಸ್ತ್ರ ವಿಭಾಗದ ಹಳೆಯ ವಿದ್ಯಾರ್ಥಿನಿ ಮತ್ತು ಎಂಎಸ್ಸಿ ಪ್ರಥಮ ರ‍್ಯಾಂಕ್ ವಿಜೇತೆ ಜಿ. ಅನುರಾಧ ಅವರು, ಕೆಎಎಸ್ ಅಧಿಕಾರಿಯಾದ ಬಳಿಕ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದು ಹೆಮ್ಮೆಯ ವಿಚಾರ. ತವರಿನ ವಿಶ್ವವಿದ್ಯಾಲಯಕ್ಕೆ ಬಂದ ಬಳಿಕ ಇಬ್ಬರು ವಿಶ್ರಾಂತ ಕುಲಪತಿಗಳು ಮತ್ತು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ಮಾತೃವಿಭಾಗದ ಕಾರ್ಯಕ್ರಮದಲ್ಲಿ ಕುಲಸಚಿವರನ್ನು ಸನ್ಮಾನಿಸಿದ್ದು ಇಂದಿನ ವಿಶೇಷವಾಗಿತ್ತು.
Also read: ಪ್ರಥಮ ಪಿಯುಸಿ ಪರೀಕ್ಷೆ ಆರಂಭ: ಉಡುಪಿಯ ಇಬ್ಬರು ವಿದ್ಯಾರ್ಥಿನಿಯರ ಗೈರು
ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಎನ್. ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಸಂಶೋಧನಾ ಲೇಖನ, ಪಠ್ಯಗಳನ್ನು ಓದುವುದರ ಜೊತೆಗೆ ಸಾಮಾಜಿಕ ಸಂವಹನ ಮತ್ತು ಭಾವನಾತ್ಮಕ ಕೌಶಲ್ಯಗಳನ್ನು ಕಲಿತುಕೊಳ್ಳಬೇಕಾದ ಅಗತ್ಯತೆ ಇದೆ. ತರಗತಿಯ ಉಪನ್ಯಾಸದ ಜೊತೆಗೆ ಪ್ರಾಯೋಗಿಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿದರು. ವಿಭಾಗದ ಮುಖ್ಯಸ್ಥ ಪ್ರೊ. ಎಂ. ವೆಂಕಟೇಶ್ವರುಲು, ಪ್ರೊ. ನಾಗರಾಜ್, ಪ್ರೊ. ವಿಜಯಕುಮಾರ, ಪ್ರೊ. ಬಿ. ತಿಪ್ಪೇಸ್ವಾಮಿ, ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post