No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ

ಕುವೆಂಪು ವಿವಿಯ ಕುಲಪತಿಗೆ ಬೀಳ್ಕೊಡುಗೆ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2023
in ಶಿವಮೊಗ್ಗ
0
ಶೈಕ್ಷಣಿಕ, ಸಂಶೋಧನಾ ಸಾಧನೆಯಿಂದ ವಿವಿ ಇನ್ನಷ್ಟು ಸದೃಢ: ಪ್ರೊ. ವೀರಭದ್ರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ |

ಕುವೆಂಪು ವಿಶ್ವವಿದ್ಯಾಲಯವು ಮೊದಲಿನಿಂದಲೂ ಶೈಕ್ಷಣಿಕ ಗುಣಮಟ್ಟದಲ್ಲಿ ಮುಂದಿದ್ದು, ಕಳೆದ ಐದು ವರ್ಷಗಳಲ್ಲಿ ಸಂಶೋಧನೆ ಮತ್ತು ಬೋಧನಾ ಕಾರ್ಯದಲ್ಲಿ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಂಡ ಪರಿಣಾಮ ರಾಷ್ಟ್ರಮಟ್ಟದ ಹಲವು ರ‍್ಯಾಂಕಿಂಗ್‌ಗಳಲ್ಲಿ ಉತ್ತಮ ಸಾಧನೆ ತೋರಿತು ಎಂದು ವಿವಿಯ ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ಸಂತಸ ವ್ಯಕ್ತಪಡಿಸಿದರು.

ಕುವೆಂಪು ವಿವಿಯ  Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರ ಕಾರ್ಯಾವಧಿ ಮಂಗಳವಾರ ಕೊನೆಗೊಳ್ಳುತ್ತಿರುವ ಸಲುವಾಗಿ ವಿವಿಯು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 03 ಗಂಟೆಗೆ ಆಯೋಜಿಸಿದ್ದ ತಮ್ಮ ಬೀಳ್ಕೊಡುಗೆ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ಉತ್ತಮ ಸಂಶೋಧನೆ ಕೈಗೊಳ್ಳಬಲ್ಲ ಆಸಕ್ತಿ, ಸಾಮರ್ಥ್ಯವಿರುವ ಅಧ್ಯಾಪಕ ವೃಂದವಿದ್ದು, ಹೆ-ಇಂಡೆಕ್ಸ್, ಕೆಎಸ್‌ಯುಆರ್‌ಎಫ್, ಎನ್‌ಐಆರ್‌ಎಫ್ ರ‍್ಯಾಂಕಿಂಗ್‌ಗಳಲ್ಲಿ ಉತ್ತಮ ಪಾಯಿಂಟ್ಸ್ಗಳೊಂದಿಗೆ ವಿವಿಧ ಸೂಚ್ಯಂಕಗಳಲ್ಲಿ ಸದಾ ಅಗ್ರ ಸ್ಥಾನ ಪಡೆಯುತ್ತಾ ಬಂದಿದೆ. ನ್ಯಾಕ್ ಮೌಲ್ಯಮಾಪನದಲ್ಲಿ ‘ಎ’ ಗ್ರೇಡ್ ಪಡೆದದ್ದು ಇದಕ್ಕೆ ಮುಕುಟಪ್ರಾಯ ಎಂದು ತಿಳಿಸಿದರು.
ಕಳೆದ ಐದಾರು ವರ್ಷಗಳಲ್ಲಿ ವಿವಿಧ ವಿಭಾಗಗಳಿಂದ ಹಿರಿಯ ಪ್ರಾಧ್ಯಾಪಕರುಗಳು ವಯೋನಿವೃತ್ತಿ ಹೊಂದಿದ್ದು, ಸರ್ಕಾರವು ಅವರ ಸ್ಥಾನಗಳನ್ನು ತುಂಬಿಕೊಳ್ಳಲು ಅವಕಾಶ ನೀಡಿದಲ್ಲಿ ವಿವಿಯ ಶೈಕ್ಷಣಿಕ ಸಂಶೋಧನಾ ಪರಂಪರೆ, ಸ್ಥಾನಗಳನ್ನು ಮುಂದುವರಿಸಲು ಬಲ ದೊರೆಯುತ್ತದೆ. ಉತ್ತಮವಾದ ಸಂಶೋಧನೆಗಳನ್ನು ನಡೆಸುತ್ತಿರುವ ಬೋಧಕರು ಸಂಶೋಧನೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ, ಪೇಟೆಂಟ್‌ಗಳನ್ನು ಪಡೆದಿದ್ದಾರೆ, ಸಂಶೋಧನಾ ಪ್ರಕಟಣೆ, ಸಾಮಾಜಿಕ ಚಟುವಟಿಕೆ ಮೂಲಕ ಜನರು, ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅರ್ಹರಾದ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿಗೆ ಪದೋನ್ನತಿ ಒದಗಿಸಿರುವುದು ತಮಗೆ ತೃಪ್ತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ವಿವಿಯಲ್ಲಿ ಉತ್ತಮ ಕಾರ್ಯನಿರ್ವಹಣೆ ನೀಡಲು ಸಲಹೆ ನೀಡಿದ, ಸಹಕರಿಸಿದ ವಿವಿಯ ಆಡಳಿತಾಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಶಿವಮೊಗ್ಗ-ಭದ್ರಾವತಿ ನಗರಗಳ ಮಾಜಿ-ಹಾಲಿ ಜನಪ್ರತಿನಿಧಿಗಳಾದ ಕೆ. ಎಸ್. ಈಶ್ವರಪ್ಪ, ಚನ್ನಬಸಪ್ಪ, ಬಿ. ವೈ. ರಾಘವೇಂದ್ರ, ಸಿಂಡಿಕೇಟ್ ಸದಸ್ಯರುಗಳು ಸೇರಿದಂತೆ ಹಲವರಿಗೆ ಅವರು ಧನ್ಯವಾದಗಳನ್ನು ತಿಳಿಸಿದರು.

Also read: ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

ಕುವೆಂಪು ವಿವಿಯು ಇಂದಿನವರೆಗೂ ಹಲವು ಸಾಧನೆಗಳನ್ನು ಮಾಡುತ್ತ ಬಂದಿದ್ದು, ಎಲ್ಲ ಅಧಿಕಾರಿ, ಬೋಧಕವರ್ಗ ತಮ್ಮ ಕೊಡುಗೆ ನೀಡಿದ್ದಾರೆ. ಆದರೆ ಹೊಸ ಸಂದರ್ಭದ ಸವಾಲುಗಳನ್ನು ಎದುರಿಸಲು ವಿವಿಯು ತನ್ನಲ್ಲಿರುವ ಅಪಾರ ಬೌದ್ಧಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಆಂತರಿಕ ಸಂಪನ್ಮೂಲ ಸೃಷ್ಟಿಸೋಣ. ನಿಯಮಿತವಾಗಿ ಕಾರ್ಯಾಗಾರ, ವಿಚಾರ ಸಂಕಿರಣಗಳು, ಕೌಶಲ್ಯ ಆಧರಿತ ಕೋರ್ಸ್ ಗಳ ತರಬೇತಿ ಆರಂಭಿಸಿ ವಿವಿಯನ್ನು ಸದೃಢಗೊಳಿಸೋಣ.
ಪ್ರೊ. ಪಿ. ಕಣ್ಣನ್, ವಿವಿಯ ನೂತನ ಕುಲಸಚಿವ  

ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್. ಕೆ., ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಹೆಚ್. ಎನ್. ರಮೇಶಬಾಬು, ಬೋಧಕೇತರ ಸಿಬ್ಬಂದಿ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ಮಾತನಾಡಿದರು. ಮಾನವ ಸಂಪನ್ಮೂಲ ವಿಭಾಗದ ಉಪಕುಲಸಚಿವ ಡಾ. ಸುರೇಶ್ ಎಂ. ವಂದಿಸಿದರು ಮತ್ತು ಉಪನ್ಯಾಸಕಿ ಡಾ. ಹಸೀನಾ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ವೀರಭದ್ರಪ್ಪ ಅವರ ಪತ್ನಿ ಚೇತನಾ ಮತ್ತು ಪುತ್ರಿ ಆಕಾಂಕ್ಷ ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಟ್ಟ ಮಾತು ಉಳಿಸಿಕೊಂಡ ಎಂಪಿ ರಾಘವೇಂದ್ರ: ಆ.10ರಿಂದ ವಿಐಎಸ್’ಎಲ್ ಪುನಾರಂಭ

Next Post

ಏಷ್ಯಾ ನೆಟ್ ಪ್ರಶಸ್ತಿ ಪುರಸ್ಕೃತ ಡಾ. ಧನಂಜಯಸರ್ಜಿ ಅವರಿಗೆ ಶಾಸಕ ರುದ್ರೇಗೌಡ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏಷ್ಯಾ ನೆಟ್ ಪ್ರಶಸ್ತಿ ಪುರಸ್ಕೃತ ಡಾ. ಧನಂಜಯಸರ್ಜಿ ಅವರಿಗೆ ಶಾಸಕ ರುದ್ರೇಗೌಡ ಅಭಿನಂದನೆ

ಏಷ್ಯಾ ನೆಟ್ ಪ್ರಶಸ್ತಿ ಪುರಸ್ಕೃತ ಡಾ. ಧನಂಜಯಸರ್ಜಿ ಅವರಿಗೆ ಶಾಸಕ ರುದ್ರೇಗೌಡ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL