ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕುವೆಂಪು ವಿವಿಗೆ Kuvempu University ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು. ಸೋಮವಾರ ಬೆಳಿಗ್ಗೆ ಹೊಸ ಕುಲಸಚಿವರಾದ ಕೆಎಎಸ್ ಅಧಿಕಾರಿ ವಿಜಯ್‌ಕುಮಾರ್ ಹೆಚ್ ಬಿ ಕರ್ತವ್ಯ ಆರಂಭಿಸಿದ್ದಾರೆ. ಇವರು ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, 2014ರ ಬ್ಯಾಚ್‌ನಲ್ಲಿ ಕೆಎಎಸ್‌ಗೆ ಆಯ್ಕೆಯಾಗಿದ್ದಾರೆ.

Also read: ಕೇಂದ್ರ ಸರ್ಕಾರದ ವಿರುದ್ಧ ಫೆ.7ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಎಸ್ ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ಎಸ್ ಗೋಪಿನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಸತ್ಯಪ್ರಕಾಶ್ ಎಂ ಆರ್ ಸೇರಿಂದತೆ ವಿವಿಧ ಆಡಳಿತಾಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post