ಕಲ್ಪ ಮೀಡಿಯಾ ಹೌಸ್ | ಸಾಗರ |
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶರಾವತಿ ನದಿ #SharavathiRiver ಬಹುತೇಕ ಭರ್ತಿಯಾಗಿದ್ದು, ಇಂದು ಲಿಂಗನಮಕ್ಕಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನುಹೊರಬಿಡಲಾಗುತ್ತದೆ.
1819 ಅಡಿ ಇರುವ ಲಿಂಗನಮಕ್ಕಿ #LinganamakkiDam ಜಲಾಶಯದಿಂದ 1816.15 ಅಡಿ ನೀರು ಇಂದು ಸಂಗ್ರಹವಾಗಿದೆ.
53,500 ಕ್ಯೂಸೆಕ್ ನೀರು ಜಲಾಶಯಕ್ಕೆ ಪ್ರಸ್ತುತ ಒಳಹರಿವಿದ್ದು, ಅಣೆಕಟ್ಟು ತುಂಬಿದ ಹಿನ್ನಲೆ ಇಂದು ಬೆಳಗ್ಗೆ ನೀರು ಹೊರಕ್ಕೆ ಬಿಡಲಾಗುತ್ತದೆ.ಇನ್ನು, ಲಿಂಗನಮಕ್ಕಿ ಅಣೆಕಟ್ಟಿಯ ರೇಡಿಯಲ್ ಗೇಟ್’ಗಳ ಮೂಲಕ ನೀರು ಹೊರಕ್ಕೆ ಬಿಡಲು ನಿರ್ಧರಿಸಲಾಗಿದ್ದು, ಬೆಳಗ್ಗೆ 10 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಹರಿಸಲಾಗುತ್ತದೆ ಎಂದು ವರದಿಯಾಗಿದೆ.
ಹಂತ ಹಂತವಾಗಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದ್ದು, ಅಣೆಕಟ್ಟೆಯ ಕೆಳಭಾಗದಲ್ಲಿ ವಾಸಿಸುವ ಸಾರ್ವಜನಿಕರಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.
ಜಲಾಶಯದ ಅಧಿಕಾರಿಗಳಿಂದ ಮುನ್ನಚ್ಚರಿಕೆ ನೋಟೀಸ್ ಹೊರಡಿಸಲಾಗಿದ್ದು, ವಾಹನದ ಮೈಕ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಇನ್ನು, ಲಿಂಗನಮಕ್ಕಿ ಅಣೆಕಟ್ಟಿಯ ರೇಡಿಯಲ್ ಗೇಟ್’ಗಳ ಮೂಲಕ ನೀರು ಹೊರಕ್ಕೆ ಬಿಡಲು ನಿರ್ಧರಿಸಲಾಗಿದ್ದು, ಬೆಳಗ್ಗೆ 10 ಗಂಟೆಗೆ 20 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಹರಿಸಲಾಗುತ್ತದೆ ಎಂದು ವರದಿಯಾಗಿದೆ.
ಹಂತ ಹಂತವಾಗಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದ್ದು, ಅಣೆಕಟ್ಟೆಯ ಕೆಳಭಾಗದಲ್ಲಿ ವಾಸಿಸುವ ಸಾರ್ವಜನಿಕರಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.
ಜಲಾಶಯದ ಅಧಿಕಾರಿಗಳಿಂದ ಮುನ್ನಚ್ಚರಿಕೆ ನೋಟೀಸ್ ಹೊರಡಿಸಲಾಗಿದ್ದು, ವಾಹನದ ಮೈಕ್ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post