ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಇಲ್ಲಿನ ಪ್ರಖ್ಯಾತ ಸ್ವಾಮಿ ಖಾನಾವಳಿಯಲ್ಲಿ ಇಂದು ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ.
ಹೊಟೇಲ್’ನಲ್ಲಿ ಬಳಸುತ್ತಿದ್ದ ಸಿಲಿಂಡರ್’ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಧಗಧಗನೆ ಹೊತ್ತಿ ಉರಿದಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ.
ಮಾಹಿತಿ ತಿಳಿದು ತತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also read: ಹಳಿ ಮೇಲೆ ಬಿದ್ದಿತ್ತು ವಿದ್ಯುತ್ ತಂತಿ: ಬೆಂಗಳೂರು ಇಂಟರ್’ಸಿಟಿ ರೈಲು ಸಂಚಾರ ವಿಳಂಬ
ಪಾತ್ರೆಗಳು ಸೇರಿದಂತೆ ಅಡುಗೆ ಕೋಣೆಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಅದೃಷ್ಟವಷಾತ್ ಯಾರಿಗೂ, ಯಾವುದೇ ರೀತಿಯ ಅನಾಹುತವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post