ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಯುವಕ ಪಾತ್ರ ಬಹು ಮುಖ್ಯವಾಗಿದ್ದು ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಬೇಕು ಎಂದು ಪ್ರಾಚಾರ್ಯರಾದ ಪಿ. ವಿಶ್ವನಾಥ ಅವರು ತಿಳಿಸಿದರು.
ಭವಾನಿ ರಾವ್ ಕೇರಿಯ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಗಳಾದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ #Vivekananda Jayanti ಅವರು ಮಾತನಾಡಿದರು.
ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ಮಾತನಾಡಿ, ಸ್ವಾಮಿ ವಿವೇಕಾನಂದರು ಯುವಕರಿಗೆ ಆದರ್ಶ. ನಮ್ಮ ದೇಶಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ. ಸ್ವಾಮಿ ವಿವೇಕಾನಂದವರ ಪ್ರೇರಣೆಯಿಂದಲೇ ಆಧುನಿಕ ಭಾರತ ನಿರ್ಮಾಣವಾಗುತ್ತಿದೆ ಎಂದರು.
ಅರುಣ ಮತ್ತು ಉದಯ ವರ್ಗದ ವಿದ್ಯಾರ್ಥಿಗಳು ವಿವೇಕಾನಂದರ ಛದ್ಮವೇಷದಲ್ಲಿ ಕಂಗೊಳಿಸಿದರು.
ವಿದ್ಯಾರ್ಥಿಗಳು ವಿವೇಕಾನಂದರ ನುಡಿಗಳನ್ನು,ಜೀವನದ ಪ್ರಮುಖ ಕಥೆಗಳನ್ನು, ಭಾಷಣ ಮಾಡಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ವರ್ಷ ಮತ್ತು ತಂಡದವರು ಪ್ರಾರ್ಥಿಸಿ, ಸ್ವಾಗತಿಸಿ, ಮಹಾಲಕ್ಷ್ಮಿ ವಂದಿಸಿದರು. ಕವನ ಮತ್ತು ಶ್ರೀಯಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
