ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತರೆಯುವಂತೆ ಉಳ್ಳಿ ಫೌಂಡೇಷನ್ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೊರೋನದಿಂದ ಕೂಲಿ ಕಾರ್ಮಿಕರು, ಬಡವರು ತೀವ್ರ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ರಾಜ್ಯಾದ್ಯಂತ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ತಿಂಡಿ, ಊಟ ನೀಡುತ್ತಿದ್ದಾರೆ. ಆದರೆ, ಈವರೆಗೂ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯದೆ ಇರುವುದರಿಂದ ಬಡವರು, ಕೂಲಿ-ಕಾರ್ಮಿಕರು, ನಿರ್ಗತಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಇಂದಿರಾ ಕ್ಯಾಂಟೀನ್ ತೆರೆಯುವಂತೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಒಂದು ವೇಳೆ ಇಂದಿರಾ ಕ್ಯಾಂಟೀನ್ ತೆರೆಯಲು ವಿಳಂಬವಾದರೆ ಉಳ್ಳಿ ಫೌಂಡೇಶನ್ ವತಿಯಿಂದ ಕ್ಯಾಂಟೀನ್ ತೆರೆದು ಉಚಿತ ಊಟ ನೀಡಲು ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post