ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ತಾಲೂಕಿನ ಚುರ್ಚುಗುಂಡಿ ಗ್ರಾಮದಲ್ಲಿ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚುರ್ಚುಗುಂಡಿ ಗ್ರಾಮದ ಮಲ್ಲಿಕಾರ್ಜುನ ಅವರ ತಂದೆ ಪರಮೇಶ್ವರಪ್ಪ (55) ಮೃತ ರೈತ ಎನ್ನಲಾಗಿದೆ.
ತಾಲೂಕಿನ ವಿವಿಧ ಬ್ಯಾಂಕ್‌ಗಳಲ್ಲಿ ಬೆಳೆ ಬೆಳೆಯಲು ಸಾಲವನ್ನು ಮಾಡಿದ್ದು ಒಟ್ಟು 4.66ರೂ.ಲಕ್ಷ ಪಡೆದಿದ್ದರು. ಸ್ಥಳೀಯ ಸಹಕಾರಿ ಬ್ಯಾಂಕಿನ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಳೆ ಸರಿಯಾಗಿ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಸಂಬಂಧ ತಾಲೂಕು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















