ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರ ಶಿಕಾರಿಪುರದಿಂದ ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಸುತ್ತಿದ್ದು ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಅಸಂಖ್ಯಾತ ಅಭಿಮಾನಿಗಳು ನೆರೆದಿದ್ದು ಶಕ್ತಿ ಪ್ರದರ್ಶನವಾಯಿತು.
ಈಗಾಗಲೇ ದಿನ ಉತ್ತಮವಾಗಿದ್ದ ಹಿನ್ನೆಲೆಯಲ್ಲಿ ಈಗಾಗಲೇ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಇಂದು ಅದ್ದೂರಿಯಾಗಿ ಸಾವಿರಾರು ಅಭಿಮಾನಿಗಳ ನಡುವೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ವಿಜಯೇಂದ್ರ ಅವರು ತಂದೆ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ನಮಸ್ಕರಿಸಿ ಆರ್ಶೀವಾದ ಪಡೆದರು. ಸಹೋದರಿಯರು ಆರತಿ ಬೆಳಗಿ ಶುಭ ಹಾರೈಸಿದರು.
Also read: ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?
ಇಂದು ಮುಂಜಾನೆ ತಂದೆ ಬಿ.ಎಸ್. ಯಡಿಯೂರಪ್ಪ, ಸೋದರ, ಸಂಸದ ಬಿ.ವೈ. ರಾಘವೇಂದ್ರ, ತಮ್ಮ ಪತ್ನಿ ಸೇರಿದಂತೆ ಕುಟುಂಬಸ್ಥರೊಂದಿಗೆ ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆನಂತರ ತೆರದ ಬೃಹತ್ ವಾಹನದಲ್ಲಿ ಯಡಿಯೂರಪ್ಪ, ರಾಘವೇಂದ್ರ, ನಟಿ ಶೃತಿ, ಎಂಟಿಬಿ ನಾಗರಾಜ್ ಸೇರಿದಂತೆ ಹಲವರು ಬೃಹತ್ ರ‍್ಯಾಲಿ ನಡೆಸಿದರು. ತಮ್ಮ ತಂದೆಯ ಅಂಬಾಸಿಡರ್ ಕಾರಿನಲ್ಲಿ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿದ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















