ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕಿನಲ್ಲಿ ನಡೆದ ಕ್ಲಷ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಮೈತ್ರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರಯತ್ನದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪ್ರಕೃತಿ ವಿದ್ಯಾ ಸಂಸ್ಥೆಯ ನೇತೃತ್ವದಲ್ಲಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಸಬಾ 2 ಕ್ಲಸ್ಟರ್ ಮಟ್ಟದ 14 ವರ್ಷ ವಯೋಮಿತಿ ಒಳಗಿನ ಬಾಲಕರ ಬಾಲಕಿಯರ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕರು ಬಾಲಕಿಯರು 3 ಪ್ರಥಮ, 2 ದ್ವಿತೀಯ ಮತ್ತು 4 ತೃತೀಯ ಸ್ಥಾನ ಪಡೆಯುವುದರ ಜೊತೆಗೆ ಬಾಲಕರ ವಿಭಾಗದಲ್ಲಿ ಕು ಪ್ರೀತಮ್ ಮತ್ತು ಬಾಲಕಿಯರ ವಿಭಾಗದಲ್ಲಿ ಕು ಆರಾಧ್ಯ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದು ಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಆಡಳಿತ ಮಂಡಳಿಯವರು, ಶಾಲಾ ಪ್ರಾಚಾರ್ಯರು, ಪ್ರಭಾರಿ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು,ಸಹ ಶಿಕ್ಷಕರು ಮತ್ತು ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post