ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಮೂಡಾ ಹಗರಣ #MUDA Scam ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಷಡ್ಯಂತ್ರದ ಕುತಂತ್ರ ಮಾಡಿವೆ ಎಂದು ವಿರೋಧಿಸಿ ತಾಲೂಕು ಅಹಿಂದ ಒಕ್ಕೂಟದ ವತಿಯಿಂದ ಇಂದು ಕರೆ ನೀಡಲಾಗಿದ್ದ ಶಿಕಾರಿಪುರ ಬಂದ್ ಯಶಸ್ವಿಯಾಗಿದೆ.
ಬಂದ್ ಅಂಗವಾಗಿ ಕನಕ ಪಾರ್ಕ್’ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮಾಲಾರ್ಪಣೆ ಮಾಡಿ, ನಂತರ ಖಾಸಗಿ ಬಸ್ ನಿಲ್ದಾಣದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.
ಅಂಗಡಿ ಮುಗ್ಗಟ್ಟುಗಳು, ಹೋಟೆಲ್, ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು ಬಂದ್ ಯಶಸ್ವಿಯಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎಸ್.ಪಿ. ನಾಗರಾಜ್ ಮಾತನಾಡಿ, ಬಡವರ ಬಂಧು, ಅನ್ನಭಾಗ್ಯ, ಕ್ಷೀರಭಾಗ್ಯ, ಗೃಹಲಕ್ಷ್ಮಿ ಗ್ರಾಮೀಣ ಜನರ ಅಭಿವೃದ್ಧಿ ಶ್ರಮಿಸುತ್ತಿರುವ ಭಾಗ್ಯದಾತ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆ ಯಶಸ್ವಿ ಸಹಿಸಲಾಗದೆ ವಿರೋಧ ಪಕ್ಷಗಳು ಅವರ ವಿರುದ್ಧ ಕುತಂತ್ರ ಮಾಡುತ್ತಿದೆ ಎಂದರು.
ಮುಡಾ ಹಗರಣದಲ್ಲಿ ಅನವಶ್ಯಕವಾಗಿ ಅವರ ಹೆಸರು ತಂದು ರಾಜ್ಯಪಾಲರ ಕೈಗೊಂಬೆಯಾಗಿಸಿಕೊಂಡು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ದೂರಿದರು.
ನೇರವಾಗಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಆಗದೆ ಕುತಂತ್ರ ಬುದ್ದಿಯನ್ನು ಬಿಜೆಪಿ ಜೆಡಿಎಸ್ ಪಕ್ಷಗಳು ಮಾಡುತ್ತಿವೆ. ಬಿಜಪಿ ಸಂಸದೀಯ ಮಂಡಳಿತ ಸದಸ್ಯ ಬಿ.ಎಸ್. ಯಡಿಯೂರಪ್ಪ, #B S Yadiyurappa ಅವರ ಪುತ್ರ ಬಿ.ವೈ. ವಿಜಯೇಂದ್ರ, #B Y Vijayendra ಸಂಸದ ಬಿ.ವೈ. ರಾಘವೇಂದ್ರ, #B Y Raghavendra ಕೇಂದ್ರ ಸಚಿವ ಕುಮಾರಸ್ವಾಮಿ #H D Kumaraswamy ಅವರು ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವನ್ನು ಮಾಡಿದ್ದಾರೆ. ಆದರೆ ಇದು ನಡೆಯುವುದಿಲ್ಲ. ಈ ಸಂದರ್ಭ ಇಡೀ ರಾಜ್ಯದ ಅಹಿಂದ ಒಕ್ಕೂಟ ಸಿದ್ದರಾಮಯ್ಯನವರ ಪರ ಇದೆ. ರಾಜ್ಯದ ಜನತೆಯ ಆರ್ಶಿವಾದ ಅವರ ಮೇಲಿದೆ ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ಅಹಿಂದ ಒಕ್ಕೂಟ ತಾಲೂಕು ಅಧ್ಯಕ್ಷ ನಗರದ ಮಾಲತೇಶ್, ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಪುರಸಭಾ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ಬಡಗಿ ಪಾಲಾಕ್ಷಪ್ಪ, ನಗರದ ರವಿಕಿರಣ್, ಅನೇಕ ಮುಖಂಡರು ಸಿದ್ದರಾಮಯ್ಯನವರ ಅಭಿಮಾನಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post