ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಾವು ಪರಿಸರವನ್ನು ರಕ್ಷಿಸಿದಾಗ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಶಿವಮೊಗ್ಗದ ಪಿಇಎಸ್ ವಿದ್ಯಾಸಂಸ್ಥೆಯ #PESCollege ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಬಿ.ವೈ. ಉಮಾದೇವಿ ತಿಳಿಸಿದರು.
ನಗರದ ಭವಾನಿ ಕೇರಿಯ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು #WorldEnvironmentDay ಉದ್ಘಾಟಿಸಿ ಮಾತನಾಡಿದರು.
Also Read>> ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ
ಭೂಮಿಯ ಮೇಲೆ ಜೀವವಿರುವ ಪ್ರತಿಯೊಂದು ಜೀವ ರಾಶಿಗೆ ಆಹಾರಕ್ಕಿಂತ ಮೊದಲು ಗಾಳಿ ಅತ್ಯಗತ್ಯವಾಗಿದೆ. ಇಂದಿನ ಸ್ಥಿತಿಗತಿಯನ್ನು ನೋಡುತ್ತಿದ್ದರೆ ಮಾನವನಿಗೆ ಗಿಡಗಳ ಮಹತ್ವದ ಅರಿವು ಉಂಟಾಗುತ್ತಿದೆ. ಮಾನವ ಚಟುವಟಿಕೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟುವುದು ಮತ್ತು ಭೂಮಿಯನ್ನು ರಕ್ಷಿಸುವುದು ಇದರ ಗುರಿಯಾಗಿದೆ ಎಂದರು.
ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥರವರು ಮಾತನಾಡಿ, ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಪರಿಸರದ ಮೇಲೆ ಮಾನವ ಚಟುವಟಿಕೆಗಳ ಹಸ್ತಕ್ಷೇಪವನ್ನು ಕಡಿಮೆ ಮಾಡುವ ಗುರಿಯನ್ನು ಇದು ಹೊಂದಿದೆ. ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿಜ್ಞಾನ ಶಿಕ್ಷಕಿಯರಾದ ವಿದ್ಯಾ ಕೋರಿಶೆಟ್ಟರ್ ರವರು ಪರಿಸರ ದಿನಾಚರಣೆಯ ಹಿನ್ನೆಲೆ ಮತ್ತು ಈ ವರ್ಷದ ಉದ್ದೇಶವನ್ನು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಸಂದೇಶ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸಲಾಯಿತು.
Also Read>> ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ
ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕರು, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಧುಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿ, ವರ್ಷಿಣಿ ಸ್ವಾಗತಿಸಿದರು. ಆರಾಧ್ಯ ವಂದಿಸಿ, ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news




















