ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮಕ್ಕಳ ಪ್ರತಿಭೆ ಹೊರಹೊಮ್ಮಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಎಂದು ಶಾಲಾ ಪೋಷಕರಾದ ಮಧುಸೂದನ್ ತಿಳಿಸಿದರು.
ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ವಿದ್ಯಾರ್ಥಿಗಳ ಕಲಿಕಾ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ತಮ್ಮ ಪಠ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿನ ಮಾದರಿಗಳ ತಯಾರಿಕೆಗೆ ಪ್ರೋತ್ಸಾಹ ನೀಡುವುದರಿಂದ ಅವರಲ್ಲಿ ಜ್ಞಾನಾಭಿವೃದ್ಧಿಗೆ ಹೆಚ್ಚು ಪ್ರೇರಣೆ ಸಿಗಲಿದೆ ಎಂದು ತಿಳಿಸಿದರು.
Also read: ಸಮಾಜಮುಖಿ ಯೋಜನೆಗಳ ಯಶಸ್ಸಿಗೆ ಸಹಭಾಗಿತ್ವ ಅತ್ಯವಶ್ಯ | ಜಿ.ಎಸ್. ನಾರಾಯಣ ರಾವ್
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಂಧೂ ವಿದ್ಯಾಶಂಕರ್ ಮಾತನಾಡಿ, ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ.ಈ ನಿಟ್ಟಿನಲ್ಲಿ ಮೈತ್ರಿ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನವು ಸಾಕ್ಷಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಚಾರ್ಯವಿಶ್ವನಾಥ ಮಾತನಾಡಿ, ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿತ್ತು ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಯಾರಿಸಿದ ಎಲ್ಲಾ ಮಾದರಿಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದ ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಮಂಜುಳಾ ಪಾಟೀಲ್,ಪಾರ್ವತಿ ಚಂದ್ರಶೇಖರ್ , ಲಕ್ಷ್ಮಿ.ಕೆ.ಸಿ.ನವೀನ್ ,ಇತರೆ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ,
ವಿಜಯಲಕ್ಷ್ಮೀ ಸ್ವಾಗತಿಸಿ, ಲಕ್ಷ್ಮೀ ವಂದಿಸಿ, ಮಮತಾ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post