ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಅಜ್ಞಾನದಿಂದ ಸುಜ್ಞಾನದ ಕಡೆಗೆ ಕರೆದುಕೊಂಡು ಹೋಗುವುದು ಶಿಕ್ಷಣ, ಗುರು ಎಂದರೆ ವ್ಯಕ್ತಿಯಲ್ಲ ಶಕ್ತಿ ಎಂದು ಉಪನ್ಯಾಸಕ ಚಂದ್ರಶೇಖರ್ ಹೇಳಿದರು.
ಕುಮದ್ವತಿ ಪಿಯು ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಹಾನ್ ವ್ಯಕ್ತಿ ಉಪರಾಷ್ಟ್ರಪತಿಯಾಗಿ ರಾಷ್ಟ್ರಪತಿಯಾಗಿ, ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹೇಗೆ ಅತ್ಯುನ್ನತ ಪದವಿಗಳನ್ನು ಅಲಂಕರಿಸಿ ಒಂದು ದೊಡ್ಡ ವಿದ್ಯಾರ್ಥಿ ಸಮೂಹಕ್ಕೆ ದಾರಿದೀಪವಾದವರು ಅಂತಹ ಮಹಾನ್ ವ್ಯಕ್ತಿಯ ಜನ್ಮದಿನವನ್ನು ಇಂದು ನಾವು ಶಿಕ್ಷಕರ ದಿನಾಚರಣೆಯಾಗಿ #Teachers Day ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ವೀರೇಂದ್ರ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಜ್ಞಾನ ಮುಂತಾದ ಮೌಲ್ಯಗಳನ್ನು ರೂಡಿಸಿಕೊಂಡಲ್ಲಿ ಸಮಾಜದ ಗಣ್ಯ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ. ಇಂದಿನ ಯುವಜನತೆ ದೇಶ ವಿದೇಶದಲ್ಲಿ ಉದ್ಯೋಗವನ್ನು ಅರಸಿ ತಮ್ಮ ಜ್ಞಾನದ ಮುಖಾಂತರ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ. ದೇಶ ಕಟ್ಟುವಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ತಿಳಿಸಿದರು.
ಈ ಕಾರ್ಯಕ್ರಮದ ಮತ್ತೊಬ್ಬ ಅತಿಥಿಯಾದ ಕುಮಾರಸ್ವಾಮಿ ಮಾತನಾಡಿ ಒಂದು ಅಕ್ಷರವನ್ನು ಕಲಿಸಿದ ಆತನು ಕೂಡ ಗುರುವೇ ಆಗಿರುತ್ತಾನೆ ಹಾಗೂ ನಮ್ಮೆಲ್ಲರಿಗೂ ತಾಯಿಯೇ ಮೊದಲ ಗುರು. ಇಂದಿನ ದಿನ ನಾವು ತಂದೆ ತಾಯಿಗೆ ನಮಸ್ಕರಿಸುವ ಮುಖಾಂತರ ಈ ದಿನವನ್ನು ಆಚರಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜ್ಞಾನದಿಂದ ಬದುಕನ್ನು ಕಟ್ಟಿಕೊಳ್ಳಬೇಕೆಂದು ಒಂದು ನೀತಿ ಕಥೆಯ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಹಾಗೂ ಸ್ವಾಗತವನ್ನು ಉಪನ್ಯಾಸಕರದ ಲವ ಸ್ವಾಗತಿಸಿದರು ಚನ್ನೇಶ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post