ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕನ್ನಡ #Kannada ಇದೊಂದು ಭಾಷೆ ಅಷ್ಟೇ ಅಲ್ಲ, ಇದು ಪ್ರತಿಯೊಬ್ಬ ಕನ್ನಡಿಗರ ಉಸಿರು. ಕುವೆಂಪು, ಶಿವರಾಮ ಕಾರಂತರು ಹಾಡಿ ಹೊಗಳಿದ ನಾಡಿಗೆ ರಾಜ್ಯೋತ್ಸವದ ಸಂಭ್ರಮ ಎಂದು ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯ ವಿಶ್ವನಾಥ ಪಿ ತಿಳಿಸಿದರು.
ಶಾಲೆಯಲ್ಲಿ ಹಮ್ಮಿಕೊಂಡಿದ್ದ 69ನೆಯ ಕನ್ನಡ ರಾಜ್ಯೋತ್ಸವ #Kannada Rajyothsava ಆಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ, ನಾಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

Also read: 11 ವರ್ಷದ ಬಾಲಕಿಯ ಗರ್ಭಪಾತಕ್ಕೆ ನ್ಯಾಯಾಲಯ ಅನುಮತಿ | ಕಾರಣವೇನು? ಏನಿದು ಘಟನೆ?
ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆಯನ್ನು ಉಳಿಸಿ ಎನ್ನುವ ಬೇಡುವ ಪರಿಸ್ಥಿತಿ ಎದುರಾಗಿರುವುದು ನಿಜಕ್ಕೂ ವಿಪರ್ಯಾಸ.ಕನ್ನಡವನ್ನು ಪ್ರೀತಿಸಿ – ಕನ್ನಡವನ್ನು ಬಳಸಿ” ಆಗ ಕನ್ನಡ ಭಾಷೆ ಬೆಳೆಯುತ್ತದೆ.ಪರ ಭಾಷೆ ಮೇಲೆ ಅಭಿಮಾನ ಇರಲಿ ಮೋಹ ಬೇಡ. ಕನ್ನಡ ನನ್ನ ಉಸಿರು ಎಂದು ಕೇವಲ ಬಾಯಿಮಾತಿಗೆ ಸೀಮಿತವಾಗದಿರಲಿ ಬದಲಾಗಿ ನಿಜವಾಗಿಯೂ ಕನ್ನಡ ಪ್ರತಿಯೊಬ್ಬರ ಉಸಿರಲ್ಲಿ ಬೆರೆತು ಹೋಗಲಿ ಎಂದು ತಿಳಿಸಿದರು.

1950 ರಲ್ಲಿ ಭಾರತವು ಗಣರಾಜ್ಯವಾಯಿತು. ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ರಚನೆಯಾದವು. ಇದು ಮೈಸೂರು ರಾಜ್ಯಕ್ಕೆ ಜನ್ಮ ನೀಡಿತು. ನವೆಂಬರ್ 1, 1956 ರಂದು ಮೈಸೂರು ಸಂಸ್ಥಾನವು ಹಿಂದಿನ ಮೈಸೂರು ಸಂಸ್ಥಾನದ ಬಹುತೇಕ ಪ್ರದೇಶವನ್ನು ಒಳಗೊಂಡಿತ್ತು. ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಲವು ತೋರಲಿಲ್ಲ. ಏಕೆಂದರೆ ಇದು ಹಿಂದಿನ ಸಂಸ್ಥಾನದ ಮತ್ತು ಹೊಸ ರಾಜ್ಯದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ಹಿನ್ನೆಲೆಗಳಿಂದ ರಾಜ್ಯದ ಹೆಸರನ್ನು ಕರ್ನಾಟಕ ಎಂದು ನವೆಂಬರ್ 1 ರಂದು 1973 ರಂದು ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಈ ದಿನವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post