ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ನಮ್ಮ ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ, 75ನೇ ವರ್ಷದ ಸ್ವಾತಂತ್ರ್ಯದ ಸಂಭ್ರಮದಲ್ಲಿ ನಮ್ಮ ಯುವ ಶಕ್ತಿ ರಾಷ್ಟ್ರ ಶಕ್ತಿಯಾಗಲಿ. ನೂತನವಾಗಿ ಪ್ರಾರಂಭವಾಗಿರುವ ಈ ಸುಸಜ್ಜಿತ ವ್ಯಾಯಾಮ ಶಾಲೆಯನ್ನು ನಮ್ಮ ನಗರದ ಯುವಕರು ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಶಿಕಾರಿಪುರ ನಗರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ PPP ಮತ್ತು ಕ್ರೀಡಾ ಇಲಾಖೆಯ ನೇತೃತ್ವದಲ್ಲಿ AVS ಮಲ್ಟಿ ಜಿಮ್ ಉದ್ಘಾಟಿಸಿ ಸಂಸದ ಬಿ.ವೈ ರಾಘವೇಂದ್ರ ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಜುಡೋ ಕ್ರೀಡಾಪಟು ಅವಿನಾಶ್ ವಾಚ್ಯನಾಯ್ಕ್, ರಾಮಾನಾಯ್ಕ್, ಹಾಲಪ್ಪ, ಮೋಹನ್, ಬೆಣ್ಣೆ ದೇವೇಂದ್ರಪ್ಪ, ಯುವ ಸಬಲೀಕರಣ ಮಂಜುನಾಥ್, ಪುರಸಭೆ ಅಧ್ಯಕ್ಷ ಲಕ್ಷ್ಮಿ ಮಾಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post