ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಕೊರೋನಾ ವಾರಿಯರ್ಸ್‌ಗಳಾದ ಪೊಲೀಸ್ ಸಿಬ್ಬಂದಿಗಳಿಗೆ ಉಳ್ಳಿ ಫೌಂಡೇಶನ್ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಪುರಸಭಾ ಸದಸ್ಯ ಉಳ್ಳಿ ದರ್ಶನ್ ಮಾತನಾಡಿ, ಕೊರೋನಾ ಸಂಕಷ್ಟದ ಸಂಧರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳು, ವಿಶ್ರಾಂತಿ ಇಲ್ಲದೆ, ತಮ್ಮ ಜೀವವನ್ನು ಲೆಕ್ಕಿಸದೆ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯ ಶ್ಲಾಘನೀಯ. ಜನರು ಅನಗತ್ಯವಾಗಿ ಓಡಾಡದೆ ಸರ್ಕಾರದ ನಿಯಮಗಳನ್ನು ತಪ್ಪದೆ ಪಾಲಿಸಿ ಕೊರೋನಾ ವಿರುದ್ಧ ಹೋರಾಡಲು ಪೋಲಿಸ್ ಸಿಬ್ಬಂದಿಗಳೊಂದಿಗೆ ಸಹಕರಿಸಬೇಕಾಗಿ ಉಳ್ಳಿ ಫೌಂಡೇಶನ್ ವತಿಯಿಂದ ವಿನಂತಿಸಿದರು.
ಈ ಸಂಧರ್ಭದಲ್ಲಿ ಉಳ್ಳಿ ಫೌಂಡೇಶನ್‌ನ ಅಧ್ಯಕ್ಷರು, ಶ್ರೀಧರ್ ಕರ್ಕಿ, ದಯಾನಂದ್ ಗಾಮ, ರಾಜು ಉಡುಗಣಿ, ಸುರೇಶ್ ಧಾರವಾಡ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post