ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ BYRaghavendra ಹೇಳಿದರು.
ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು. ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.
ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ತಂದೆಯವರಾದ ಯಡಿಯೂರಪ್ಪ ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ. ನನ್ನ ಮೇಲೆಯೂ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡುವುದೇ ನನ್ನ ಗುರಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post