ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದೇಶದಲ್ಲಿ ನರೇಂದ್ರ ಮೋದಿಯವರ ನಾಯಕತ್ವದ ಕೇಂದ್ರ ಸರ್ಕಾರವು 150 ಕೋಟಿಗೂ ಹೆಚ್ಚು ಲಸಿಕೆಯನ್ನು ನೀಡಿದೆ, ಆದರೆ ಶೇ.30ರಷ್ಟು ಜನರು ದೇಶದಲ್ಲಿ ಇನ್ನೂ ಲಸಿಕೆಯನ್ನು ತೆಗೆದುಕೊಂಡಿಲ್ಲ. ಜನತೆಗೆ ಜಾಗೃತಿಯ ಜೊತೆಗೆ ಲಸಿಕೆಯನ್ನು ತೆಗೆದುಕೊಳ್ಳಲು ಪ್ರೆರೇಪಿಸಬೇಕಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ನಗರದ ಚೆನ್ನಕೇಶವನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೆಡೆದ ಆರೋಗ್ಯ ಕಾರ್ಯಕರ್ತರು ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಬುಸ್ಟರ್ ಡೋಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸದಸ್ಯರು ತಮ್ಮ ವಾರ್ಡ್ ಗಳಲ್ಲಿ ಸಂಘ ಸಂಸ್ಥೆಗಳ ಸಹಾಯದಿಂದ 100ಕ್ಕೆ 100 ಲಸಿಕೆಯನ್ನು ತೆಗೆದುಕೊಳ್ಳುವಂತಾಗಬೇಕು ಆಗ ಮಾತ್ರ ಶೇ.100ರಷ್ಟು ಲಸಿಕೆಯ ಗುರಿ ತಲುಪಬಹುದು ಎಂದರು.
ಪುರಸಭೆ ಅಧ್ಯಕ್ಷರಾದ ಲಕ್ಸ್ಮಿ ಮಹಲಿಂಗಪ್ಪ, ಪುರ ಸಭೆಯ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post