No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Sunday, October 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಗುಣಾತ್ಮಕ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಡಾ. ವೀರೇಂದ್ರ ಅಭಿಮತ

ಶಿಕಾರಿಪುರ | ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಾಂಸ್ಕೃತಿಕ ವೇದಿಕೆ ಸಮಾರೋಪ

kalpa News by kalpa News
December 24, 2025
in ಶಿಕಾರಿಪುರ
0
ಗುಣಾತ್ಮಕ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಡಾ. ವೀರೇಂದ್ರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಗುಣಾತ್ಮಕ ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ. ವೀರೇಂದ್ರ ಅಭಿಪ್ರಾಯಪಟ್ಟರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಸುಗಂಧ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಿಇಡಿ ಶಿಕ್ಷಣದಲ್ಲಿ ಕೇವಲ ಜ್ಞಾನವನ್ನು ಮಾತ್ರ ನೀಡದೇ, ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳ ತರಬೇತಿಯನ್ನೂ ಸಹ ನೀಡಲಾಗುತ್ತದೆ. ವ್ಯಕ್ತಿ ಜ್ಞಾನವಂತನಾದರೆ ಸಾಲದು ಆ ವ್ಯಕ್ತಿ ಪಡೆದ ಜ್ಞಾನವನ್ನು ಯಾವ ರೂಪದಲ್ಲಿ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಾನೆ ಎಂಬುದು ಮುಖ್ಯ. ಇಲ್ಲಿ ನಾಯಕತ್ವ, ಸಂವಹನ, ಪ್ರಸ್ತುತೀಕರಣಗಳಂತಹ ಗುಣಗಳನ್ನೂ ಸಹ ಪಡೆದಾಗ ಶಿಕ್ಷಣಕ್ಕೆ ಬೆಲೆ ಎಂದರು.

ಶಿಕ್ಷಣವನ್ನು ಕಲಿಯುವಾಗ ಅತ್ಯಂತ ಪರಿಶ್ರಮ, ಶಿಸ್ತು, ಸಂಯಮ, ಸಮಯ ಪ್ರಜ್ಞೆ ಬಹಳ ಮುಖ್ಯ ಈ ನಿಟ್ಟಿನಲ್ಲಿ ಯಾರು ಇವುಗಳನ್ನು ಜಾಗರೂಕರಾಗಿ ನಿರ್ವಹಿಸುತ್ತಾರೋ ಅವರು ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಯಾವ ಹುದ್ದೆಯೂ ಕಡಿಮೆ ಅಲ್ಲ, ಯಾವ ಹುದ್ದೆಯೂ ಹೆಚ್ಚು ಅಲ್ಲ ಆದರೆ, ಅವುಗಳನ್ನು ನಿಭಾಯಿಸುವುದರಲ್ಲಿ ಜಾಗರೂಕರಾಗಿರಬೇಕು ಎಂದರು.
ಸಮಾಜದಲ್ಲಿ ಹೆಚ್ಚು ಅಪರಾಧಗಳನ್ನು ಮಾಡುವ ಕೃತ್ಯಗಳು ವಿದ್ಯಾವಂತರಿಂದ ಎಂಬುದು ದುರದೃಷ್ಟಕರ. ಆದ್ದರಿಂದ, ಶಿಕ್ಷಣವನ್ನು ಆಸಕ್ತಿಯಿಂದ ಮತ್ತು ಪ್ರೀತಿಯಿಂದ ಕಲಿತಾಗ ಮಾತ್ರ ವಿದ್ಯಾರ್ಥಿಗಳಿಂದ ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ ಆದ್ದರಿಂದ ವಿದ್ಯಾರ್ಥಿಗಳು ಉತ್ತಮವಾಗಿ ಬರೆಯುವ ಹಾಗೂ ಓದುವ ಕೌಶಲವನ್ನು ಕಲಿಯಬೇಕು, ಇಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದಂತೆ, ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿ ಉತ್ತಮ ಸಂಸ್ಕಾರಯುತವಾಗಿ ಕಲಿಯುವಂತಾಗಲಿ ಎಂದು ಆಶಿಸಿದರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದದ ಪ್ರಾಚಾರ್ಯರಾದ ಡಾ. ಜಿ.ಎಸ್. ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕಲಿಯುವ ಹಂತಗಳಲ್ಲಿ ಏಳು ಪ್ರಮುಖ ಸಂಗತಿಗಳನ್ನು ಪಾಲಿಸಿದಾಗ ಮಾತ್ರ ಯಶಸ್ಸು ಸಾಧ್ಯ ಓದುವ ಹವ್ಯಾಸ, ಮಾನಸಿಕ ಆರೋಗ್ಯ, ಸಹಾಯ ಮಾಡುವುದು ಧನ್ಯವಾದಗಳನ್ನು ಹೇಳುವುದು, ಧನಾತ್ಮಕ ಮನೋಧೋರಣೆ, ಸಮಯ ಪಾಲನೆ, ಆತ್ಮಸ್ಥೆರ್ಯ, ಹೋಲಿಕೆ ಮಾಡಿಕೊಳ್ಳದಿರುವುದು ಇತ್ಯಾದಿ ಗುಣಗಳನ್ನು ಕಲಿಯುವ ಹಂತದಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಲು ಸಾಧ್ಯ ಎಂದರು.

ಬೇರೊಬ್ಬರನ್ನು ಮೆಚ್ಚಿಸುವ ಬದಲು ನಾವು ಉತ್ತಮ ದೇಶ ಪ್ರಜೆಯಾಗಬೇಕು. ಕಲಿಯುವಾಗ ತಾತ್ಸಾರ ಮಾಡಿದರೆ ಜೀವನ ಪೂರ್ತಿ ಅಳಬೇಕಾಗುತ್ತದೆ, ಈಗ ಉತ್ತಮವಾಗಿ ಕಲಿತರೆ ಜೀವನಪೂರ್ತಿ ಉತ್ತಮ ಜೀವನವನ್ನು ನಡೆಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕಲಿಯುವಾಗ ಸರಿಯಾಗಿ ಕಲಿಯಬೇಕು, ಉತ್ತಮ ಪ್ರಜೆಯಾಗಿ ಎಂದು ನುಡಿದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶಿವಕುಮಾರ್ ಎಂ.ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ಪಿ. ವಿಶ್ವನಾಥ್, ಶಿಕ್ಷಣ ಮಹಾವಿದ್ಯಾಲಯದ ಬೋಧಕ, ಬೋಧಕೇತರ ವರ್ಗದವರು ಮತ್ತು ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಾರ್ಷಿಕ ಸಂಚಿಕೆಗಳಾದ ಸುಜ್ಞಾನ, ವಾರ್ಷಿಕ ಚಟುವಟಿಕೆಗಳ ಸಂಚಿಕೆ ಹಾಗೂ ಭಾಷಾ ಸಂಘ (ಕನ್ನಡ – ಚಿಗುರು, ಇಂಗ್ಲೀಷ್ – Inspire), ಸಮಾಜ ವಿಜ್ಞಾನ (ಯುಗ ಸ್ಮೃತಿ) ವಿಜ್ಞಾನ ಸಂಘಗಳ ವಾರ್ಷಿಕ ಸಂಚಿಕೆ ಹಾಗೂ ವಿದ್ಯಾರ್ಥಿಗಳು ಪ್ರತಿದಿನ ಪ್ರಾರ್ಥನಾ ವಿಷಯ ಮಂಡನೆಯನ್ನು ಮಾಡಿದ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು. 2024-2025ನೇ ಸಾಲಿನಲ್ಲಿ ಕಾಲೇಜಿನಲ್ಲಿ ನಡೆದ ಸಮಗ್ರ ಕಾರ್ಯಚಟುವಟಿಕೆಗಳ ಸಂಕ್ಷಿಪ್ತ ನೋಟ ವಾರ್ಷಿಕ ವರದಿಯನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ದೇವರಾಜ ವೈ., ವಾಚನ ಮಾಡಿದರು.

ಅರ್ಪಿತಾ ಹಾಗೂ ತಂಡದವರು ಪ್ರಾರ್ಥಿಸಿ, ಪ್ರಶಿಕ್ಷಣಾರ್ಥಿ ರಮೇಶ್ ಎಂ. ಗುತ್ತೇದಾರ್ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿಗಳಾದ ಕೆ.ಎಸ್. ಐಶ್ವರ್ಯ ವಂದನಾರ್ಪಣೆ ಮಾಡಿ, ಜಿ.ಸಿ. ಮೌನೇಶ್ ನಿರೂಪಿಸಿದರು.

ವೇದಿಕೆ ಕಾರ್ಯಕ್ರಮದ ನಂತರ ಚತುರ್ಥ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮವನ್ನು ನೆರವೇರಿಸಿದರೆ, ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಚತುರ್ಥ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಬಿಳ್ಕೊಡುಗೆ ಕಾರ್ಯಕ್ರಮವನ್ನು ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BEdKannada News WebsiteKumadvathi College of EducationLocal NewsMalnad Newsquality educationShikaripuraShimogaShivamoggaShivamogga NewsViekanandaಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಗುಣಾತ್ಮಕ ಶಿಕ್ಷಣಶಿಕಾರಿಪುರಶಿಕ್ಷಣಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Margazhi Matram 2025 – 6th Edition | Don’t miss the arts festival if you are in Chennai

Next Post

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

kalpa News

kalpa News

Next Post
ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ನಿರಂತರ ಪ್ರೋತ್ಸಾಹ ನೀಡಿ: ಶಾಸಕ ಸುನೀಲ್ ಕುಮಾರ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL