ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ #Southwestern Graduate Constituency ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದರು.
ಇಲ್ಲಿನ ತಾಲ್ಲೂಕು ಬಿಜೆಪಿ ಕಛೇರಿಯಲ್ಲಿ ಬುಧವಾರ ಬೆಳಗ್ಗೆ ಅವರು ಪತ್ರಿಕಾಗೋಷ್ಟಿಯಲ್ಲಿನಮಾತನಾಡಿ, ಜೆಡಿಎಸ್ ಮೈತ್ರಿಯೊಂದಿಗೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಇನ್ನೆರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ, ಕಳೆದ ಲೀಕಸಭಾ ಚುನಾವಣೆಯಲ್ಲಿ ಹೊಂದಾಣಿಕೆಯಂತೆ ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ ಚುನಾವಣೆ ಮಾಡಲಾಗುತ್ತಿದೆ. ಈ ಚುನಾವಣೆಯನ್ನು ಎರಡೂ ಪಕ್ಷಗಳೂ ಬಹಳ ಗಂಭೀರವಾಗಿ ಪರಿಗಣಿಸಿವೆ ಎಂದರು.

Also read: ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಈಗಾಗಲೇ ಮಂಗಳೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ದಾವಣಗೆರೆ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ, ಪೂರಕವಾದ ವಾತಾವರಣ ಇದ್ದು, ಗೆಲುವುದು ಖಚಿತ, ಪದವೀಧರರ ಧ್ವನಿಯಾಗಿ ಸೇವೆ ಸಲ್ಲಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post